ಇಂದು ವೀರರಾಣಿ ಕಿತ್ತೂರು ಚನ್ನಮ್ಮ ನವರ ಜಯಂತೋತ್ಸವ.
ಹುನಗುಂದ ಅಕ್ಟೋಬರ್.22

ಅಖಿಲ ಭಾರತ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಅ.23 ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಪಟ್ಟಣದ ಚನ್ನಮ್ಮ ಸರ್ಕಲ್‌ನಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಜಯಂತೋತ್ಸವ ಜರುಗಲಿದೆ.ನಂತರ ಬೆಳಗ್ಗೆ 1೦ ಗಂಟೆಗೆ ತಾಲೂಕಾಡಳಿತ ವತಿಯಿಂದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗುವ ಕಿತ್ತೂರ ಚನ್ನಮ್ಮನವರ ಜಯಂತೋತ್ಸವ ಕಾರ್ಯಕ್ರಮ ಜರುಗಲಿದ್ದು.ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ಉಪಾಧ್ಯಕ್ಷ ಬಸವರಾಜ ಗೊಣ್ಣಾಗರ ಹಾಗೂ ತಾಲೂಕು ಅಧ್ಯಕ್ಷ ಮಹಾಂತೇಶ ನಾಡಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ. ಹುನಗುಂದ