ಮತಗಟ್ಟೆಗಳು ವಿಶೇಷ ಚೇತನರ ಸ್ನೇಹಿಯಾಗಿರಬೇಕು – ಅಬೀದ್ ಗದ್ಯಾಳ.
ಇಂಡಿ ಏಪ್ರಿಲ್.16
ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ವಿಶೇಷ ಚೇತನರ ಮತದಾನಕ್ಕೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಸಹಾಯಕ ಚುನಾವಣೆ ಅಧಿಕಾರಿಗಳು ಮತ್ತು ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ವಿಶೇಷ ಚೇತನರ ಮತದಾರರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಸಂಬಂದ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಇಂಡಿ ಮತ ಕ್ಷೇತ್ರದಲ್ಲಿ 3506 ಕ್ಕೂ ಹೆಚ್ಚು ಮತದಾರರನ್ನು ಗುರುತಿಸಲಾಗಿದ್ದು ಮತಗಟ್ಟೆಗಳಲ್ಲಿ ವಿಶೇಷ ಚೇತನರಿಗೆ ಮತದಾನ ಮಾಡಲು ಅನುಕೂಲ ವಾಗುವಂತೆ ಸೌಲಭ್ಯಗಳನ್ನು ಒದಗಿಸಬೇಕು ಎಂದರು.ವಿಶೇಷ ಚೇತನರು ಮತದಾರರು ಮತದಾನ ದಿಂದ ವಂಚಿತರಾಗದಂತೆ ನಿಗಾ ವಹಿಸಬೇಕು, ಇದಕ್ಕಾಗಿ ಪ್ರತಿ ಗ್ರಾ.ಪಂ ವಾರು ಹಾಗೂ ಪ್ರತಿ ಮತಗಟ್ಟೆವಾರು ಎಷ್ಟು ವಿಶೇಷ ಚೇತನರಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿ ಕಾರ್ಯ ತುರ್ತಾಗಿ ಆಗಬೇಕಾಗಿದೆ. ಮತದಾನ ದಿನದಂದು ವಿಶೇಷ ಚೇತನರಿಗೆ ಮತ ಚಲಾಯಿಸಲು ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಮತದಾರರ ಚೀಟಿಯನ್ನು ಕ್ಷೇತ್ರ ಮತಗಟ್ಟೆ ಅಧಿಕಾರಿಗಳ ಮೂಲಕ ವಿತರಿಸಲಾಗಿದೆ ಎಂದು ತಿಳಿಸಿದರು.ವಿಶೇಷ ಚೇತನರು ಮತದಾನಕ್ಕೆ ಮತಗಟ್ಟೆಗಳಿಗೆ ಆಗಮಿಸಿದಾಗ ಇತರರೊಂದಿಗೆ ಸರತಿ ಸಾಲಿನಲ್ಲಿ ಕಾಯಿಸದೇ ಆದ್ಯತೆ ಮೇರೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಕೊಡಬೇಕು.ಮತಗಟ್ಟೆಗಳು ವಿಶೇಷ ಚೇತನರ ಸ್ನೇಹಿಯಾಗಿರಬೇಕು. ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ,ಕುಳಿತು ಕೊಳ್ಳಲು ಆಸನಗಳ ವ್ಯವಸ್ಥೆ, ರ‍್ಯಾಂಪ ವ್ಯವಸ್ಥೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಸಮರ್ಪಕ ವಾಗಿರಬೇಕು.ಸಭೆಯಲ್ಲಿ ತಹಸೀಲ್ದಾರ ಮಂಜುಳಾ ನಾಯಕ, ಇಒ ನೀಲಗಂಗಾ ಬಬಲಾದ ಸೇರಿದಂತೆ ನೋಡಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ.ಹರಿಜನ ಇಂಡಿ