ಗುಣಮಟ್ಟದ ಆರೋಗ್ಯಕ್ಕಾಗಿ ಒತ್ತು ಕೊಡಲು ಪ್ರಾಮಾಣಿಕವಾಗಿ ಶ್ರಮಿಸುವೆ – ಶಾಸಕ ಡಾ, ಶ್ರೀ ನಿವಾಸ್.ಎನ್.ಟಿ
ಚಿಕ್ಕ ಜೋಗಿಹಳ್ಳಿ ಜು.30





ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಚಿಕ್ಕ ಜೋಗಿಹಳ್ಳಿ ಗ್ರಾಮದಲ್ಲಿ 2023-24 ನೇ ಸಾಲಿನಲ್ಲಿ ಮಹತ್ವಾಕಾಂಕ್ಷಿ ತಾಲೂಕುಗಳ ಅಭಿವೃದ್ಧಿ ಯೋಜನೆ ಅಡಿಯಲ್ಲಿ “ಸಮುದಾಯ ಆರೋಗ್ಯ ಕೇಂದ್ರದ ದುರಸ್ಥಿಯ ಕಾರ್ಯ ಮತ್ತು ನವೀಕರಣ” ದ ಭೂಮಿ ಪೂಜೆಯನ್ನು ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್.ಎನ್.ಟಿ ಅವರು ದಿ. 30-07-24 ರಂದು ನೆರವೇರಿಸಿ ಮಾತನಾಡಿದರು. ಅತ್ಯಂತ ಹಿಂದುಳಿದ ಪ್ರದೇಶವಾದ ಚಿಕ್ಕ ಜೋಗಿಹಳ್ಳಿ ಭಾಗದಲ್ಲಿ ಗುಣಮಟ್ಟದ ಆರೋಗ್ಯಕ್ಕಾಗಿ ಹೆಚ್ಚಿನ ಒತ್ತು ಕೊಡುವ ನಿಟ್ಟಿನಲ್ಲಿ ನನ್ನ ಸ್ವಂತ ಆಸ್ಪತ್ರೆ ಎಂಬ ಮನಸ್ಥಿತಿಯಿಂದ ಪ್ರಾಮಾಣಿಕವಾಗಿ ಅಭಿವೃದ್ಧಿ ಪಡಿಸಲು ಕೆಲಸ ಮಾಡುತ್ತೇನೆ ಎಂದರು. ಶಾಸಕರು, ತಮ್ಮ ಬಾಲ್ಯದ ದಿನಗಳಲ್ಲಿ ಜ್ವರ ಬಂದ ವೇಳೆ ಇಲ್ಲಿ ಚಿಕಿತ್ಸೆ ಪಡೆದಿರುವುದನ್ನು ಸ್ಮರಿಸಿ ಕೊಂಡರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು, ಸಿಬ್ಬಂದಿ, ಗುತ್ತಿಗೆದಾರರು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್ ಕೆ. ಹೊಸಹಳ್ಳಿ.