ರಾಜ್ಯ ಸಮಿತಿ ಸದಸ್ಯರಾಗಿ ಗುಳಿಗಿ ವೀರೇಂದ್ರ ಕುಮಾರ ನೇಮಕ.
ಕೂಡ್ಲಿಗಿ ಏಪ್ರಿಲ್.23





ಪಟ್ಟಣದ ಗುಳಿಗಿ ವೀರೇಂದ್ರ ಕುಮಾರ್ ಅವರನ್ನು ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿರಣ್ ಕುಮಾರ್ ಈ ಕುರಿತು ಆದೇಶ ಪತ್ರ ನೀಡಿದ್ದು, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತಾ, ಪಕ್ಷ ಸಂಘಟನೆಯನ್ನು ತಳ ಮಟ್ಟದಲ್ಲಿ ಸದೃಡ ಗೊಳಿಸುತ್ತ, ಬರುವ ಎಲ್ಲಾ ಸವಾಲುಗಳನ್ನು ಎದುರಿಸಿ, ಪಕ್ಷಕ್ಕೆ ಶಕ್ತಿ ತುಂಬಿ, ಪಕ್ಷದ ವರ್ಚಸನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ. ಅಧಿಕಾರ ವಹಿಸಿಕೊಂಡು ಶನಿವಾರ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಗುಳಿಗಿ ವೀರೇಂದ್ರ ಕುಮಾರ್, ನಾಲ್ಕು ಜಿಲ್ಲೆಗಳ ಜಿಲ್ಲಾಧ್ಯಕ್ಷರೊಂದಿಗೆ ಸಮನ್ವಯ ಸಾಧಿಸಿ ಪಕ್ಷದ ಸಂಘಟನೆಗೆ ಒತ್ತುನೀಡಿ, ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟಿಸಿ ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಕ್ರಮವನ್ನು ಮುಂಚೂಣಿ ನಾಯಕರೊಂದಿಗೆ ಹಾಗೂ ಮಂಡಲದ ಅಧ್ಯಕ್ಷರೊಂದಿಗೆ ರೂಪು ರೇಷೆಗಳ ಬಗ್ಗೆ ಚರ್ಚಿಸಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಲು ಪಣ ತೊಡುವುದಾಗಿ ತಿಳಿಸಿದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.