ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು – ಆರೋಪಿ ನ್ಯಾಯಾಂಗ ಬಂಧನಕ್ಕೆ.
ವಿಟ್ಲ (ದಕ್ಷಿಣ ಕನ್ನಡ) ಸ.24





ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಅವರ ಅಪ್ರಾಪ್ತ ವಯಸ್ಸಿನ ಮಗಳಿಗೆ ಸ್ಥಳೀಯ ನಿವಾಸಿ ನಾರಾಯಣ (42) ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ಬೆಳಕಿಗೆ ಬಂದ ನಂತರ, ಬಾಲಕಿಯ ಕುಟುಂಬಸ್ಥರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾಯ್ದೆಯಾದ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿಯನ್ನು ಬಂಧಿಸಿ, ನಿಯಮಾನುಸಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಪ್ರಕರಣದ ಗಂಭೀರತೆ ಪರಿಗಣಿಸಿ, ತನಿಖೆ ಮುಂದುವರೆಯುವ ದೃಷ್ಟಿಯಿಂದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ವರದಿ:ಆರತಿ.ಗಿಳಿಯಾರು.ಉಡುಪಿ