ಖಾಲಿ ಕುರ್ಚಿಗೆ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಮತ್ತು ಮಾಜಿ ಶಾಸಕ ಪಾಟೀಲ.
ಹುನಗುಂದ ಏಪ್ರಿಲ್.28





ಪಟ್ಟಣದ ವಿಜಯ ಮಹಾಂತೇಶ ವೃತ್ತದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡ್ರ ಮತ್ತು ಮಾಜಿ ಶಾಸಕ ದೊಡ್ಡನಗೌಡ ಪಾಟೀಲರು ಖಾಲಿ ಕುರ್ಚಿಗಳಿಗೆ ಭಾಷಣ ಮಾಡಿದ್ದು ವಿಶೇಷವಾಗಿತ್ತು.ಶನಿವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಬಹಿರಂಗ ಪ್ರಚಾರ ಸಭೆಯು ಸಾಯಂಕಾಲ ೭ ಗಂಟೆಗೆ ನಿಗಧಿ ಗೊಳಿಸಲಾಗಿತ್ತು. ಆದರೆ ೮ ಗಂಟೆಗೆ ಕಾರ್ಯಕ್ರಮ ಆರಂಭವಾಯಿತು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡ್ರ ವೇದಿಕೆಗೆ ಆಗಮಿಸುತ್ತಿದ್ದಂತೆ ಸಭೆಗೆ ಆಗಮಿಸಿದ ಮಹಿಳೆಯರು ಹೊರಟು ಹೋದರು.ಕೈ ಬೆರಳಿಕೆಗೆ ಏಣಿಸುವಷ್ಟು ಜನರು ಮಾತ್ರ ಇದ್ದರು.ನಂತರ ಖಾಲಿ ಕುರ್ಚಿಗೆ ಭಾಷಣ ಮಾಡುವ ಸ್ಥಿತಿ ನಿರ್ಮಾಣವಾಯಿತು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಲ್ಲಿಕಾರ್ಜುನ.ಎಂ.ಬಂಡರಗಲ್ಲ ಹುನಗುಂದ.