ಮೋದಿ ಮತ್ತೊಮ್ಮೆ ಪ್ರಧಾನಿ ಶತ ಸಿದ್ಧ, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ – ಬಂಗಾರು ಹನುಮಂತ.
ಕೂಡ್ಲಿಗಿ ಮೇ.01

10 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ ಹಾಗೂ ಸಾಮಾನ್ಯ ಜನರ ಬದುಕನ್ನು ಹಸನಾಗಿಸುವ ಕೆಲಸವನ್ನು ಬಿಜೆಪಿ ನೇತೃತ್ವದ ಮೋದಿ ಸರಕಾರ ಮಾಡಿದ್ದು, ಈಗ ಮತ್ತೊಮ್ಮೆ ಕೇಂದ್ರದಲ್ಲಿ ಮೋದಿಯವರ ನೇತೃತ್ವದಲ್ಲಿ ಸರಕಾರ ರಚನೆಯಾಗುವುದು ಖಚಿತ. ಭಾರತವನ್ನು ವಿಶ್ವ ಗುರುವಾಗಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ರಾಜ್ಯ ಅಧ್ಯಕ್ಷರಾದ ಬಂಗಾರು ಹನುಮಂತು ಹೇಳಿದರು. ಅವರು ಪಟ್ಟಣದ ಗಾಣಿಗರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಳ್ಳಾರಿ ವಿಜಯನಗರ ಲೋಕಸಭಾ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರ ಗೆಲುವಿಗಾಗಿ ಹೊಸಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಯ ಮುಖಂಡರುಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ರಾಷ್ಟ್ರದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆ ಇದಾಗಿದೆ. ಕಾರ್ಯಕರ್ತರು ಸಂಕಲ್ಪ ತೊಡುವ ಮೂಲಕ ತಾವೇ ಅಭ್ಯರ್ಥಿಗಳಂತೆ ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಿದೆ. ಹಾಗಾಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಶ್ರಮಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಬಣವಿಕಲ್ಲು ನಾಗರಾಜ್, ಉಪಾಧ್ಯಕ್ಷ ಓಬಳೇಶ್, ಜಿಲ್ಲಾ ಉಪಾಧ್ಯಕ್ಷ ಭದ್ರಾವತಿ ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವ್ ರೆಡ್ಡಿ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರೇವಣ್ಣ, ಸೂರ್ಯ ಪಾಪಣ್ಣ ಚೆನ್ನಪ್ಪ ಚಂದ್ರಮೌಳಿ, ಕಲ್ಲೇಶ್ ಗೌಡ್ರು, ಮೂಗಣ್ಣ, ಬಾಲಪ್ಪಣ್ಣ, ಭೀಮಣ್ಣ, ದುರುಗೇಶ್, ಕೆ. ಸುಭಾಷ್ ಚಂದ್ರ.ಹಡಗಲಿ ಬಸವರಾಜ, ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷ ಶಾರದ, ಪವಿತ್ರ, ನೇತ್ರಾವತಿ ಮಂಜುನಾಥ್ , ರೇಖಾ ಮಲ್ಲಿಕಾರ್ಜುನ, ಗೀತಾ, ಮಂಡಲ ಕಾರ್ಯದರ್ಶಿ ಮಂಜುನಾಥ, ಸಿದ್ದೇಶ್, ಯುವ ಮೋರ್ಚಾ ಅಧ್ಯಕ್ಷ ಅಜಯ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ. ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.