ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕಿಗೆ ಕಾರ್ತಿಕ ಬಡಗೌಡರ ಪ್ರಥಮ.
ಕಂದಗಲ್ಲ ಮೇ.,09

ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಕಾರ್ತಿಕ ರುದ್ರಗೌಡ ಬಡಗೌಡರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ ಕ್ಕೆ ೬೧೭ (೯೮.೭೨) ಅಂಕವನ್ನು ಪಡೆದು ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದು ಕೊಳ್ಳುವ ಮೂಲಕ ಅವಳಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದು.ವಿದ್ಯಾರ್ಥಿಯ ಸಾಧನೆಗೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಸ್ಮೀನ ಕಿಲ್ಲೆದಾರ, ಶಾಲೆ ಮುಖ್ಯೋಪಾಧ್ಯಾಯರು,ಶಿಕ್ಷಕರ ಬಳಗ ಅಭಿನಂದಿಸಿದ್ದಲ್ಲದೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಲ್ಲಿಕಾರ್ಜುನ.ಎಂ.ಬಂಡರಗಲ್ಲ ಹುನಗುಂದ.