ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ.
ಹಿರೇಹೆಗ್ದಾಳ ಮೇ.14

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಿರೇಹೆಗ್ಡಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ. ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು 2023-24 ನೇ. ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಲ್ಲರೂ ನೂರರಷ್ಟು ಫಲಿತಾಂಶ ಗಳಿಸಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ನಾಗರಾಜ.ಕೆ ಪ್ರಾಂಶುಪಾಲರು ತಿಳಿಸಿದ್ದಾರೆ. ಶಾಲೆಗೆ ವಿದ್ಯಾರ್ಥಿನಿ ಮೈನಳ್ಳಿ ಮಧುಶ್ರೀ 584 ಅಂಕ 93.44 ಶೇ ಪಡೆಯುವ ಮೂಲಕ ಪ್ರಥಮ, ಜಿ.ವರ್ಷಿತ 577 ಅಂಕ 92.32 ಶೇ ದ್ವಿತೀಯ ಅಮೂಲ್ಯ.ಎನ್ .ಇ 559 ಅಂಕ 89.44 ಶೇ ತೃತೀಯ ಸ್ಥಾನ ಪಡೆದು ಕೊಂಡಿದ್ದಾರೆ. 10 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 1 ವಿದ್ಯಾರ್ಥಿನಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ.ಬಿ.ಸಾಲುಮನೆ. ಕೂಡ್ಲಿಗಿ