ಇಂದು ರಾಂಪುರ ಎಸ್‌ಪಿಎಸ್ ಶಾಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಡಿಟಿ ಶ್ರೀನಿವಾಸ್ ಶಿಕ್ಷಕರು ಪರವಾಗಿ ಅಭಿನಂದನೆ ಸಲ್ಲಿಸಿದ ಶಾಸಕರು
ರಾಂಪುರ ಮೇ.15

ಇಂದು ರಾಂಪುರ ಎಸ್ ಪಿ ಎಸ್ ಆರ್ ಶಾಲೆಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಕಾಂಗ್ರೆಸ್ ಪಕ್ಷದ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಿ ಟಿ ಶ್ರೀನಿವಾಸ್ ಅವರ ಪರವಾಗಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನನ್ನ ನೆಚ್ಚಿನ ಶಿಕ್ಷಕರು ಮೊದಲನೇ ಪ್ರಾಶಸ್ಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೀಡುವ ಮೂಲಕ ಅಭ್ಯರ್ಥಿಗೆ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.ಮಾಜಿ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ಸಂಸ್ಥೆಯ ಅಧ್ಯಕ್ಷರಾದ ಬಿ ಪಿ ಜಯಪ್ರಕಾಶ್ ಮುಖಂಡರಾದ ಎಚ್ ಟಿ ನಾಗರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ವಿವಿಧ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ. ಹೊಂಬಾಳೆ ಮೊಳಕಾಲ್ಮುರು.