ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಪುಸ್ತಕಗಳ ಅಧ್ಯಯನ ಸಹಕಾರಿ – ಗದ್ದಿಗೆ ತಿಪ್ಪೇಸ್ವಾಮಿ ಅಭಿಪ್ರಾಯ.

ಚಳ್ಳಕೆರೆ ಜೂ.06

ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಪುಸ್ತಕಗಳ ಅಧ್ಯಯನ ಬಹಳ ಸಹಾಯ ಮಾಡುತ್ತದೆ ಎಂದು ಚಳ್ಳಕೆರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಶ್ರೀ ಗದ್ದಿಗೆ ತಿಪ್ಪೇಸ್ವಾಮಿ ತಿಳಿಸಿದರು. ತಾಲೂಕಿನ ಸಿದ್ದಾಪುರ ಗ್ರಾಮದ ಡಾ, ಬಿ.ಆರ್ ಅಂಬೇಡ್ಕರ್ ಗ್ರಂಥಾಲಯಕ್ಕೆ ಸಮಾಜ ಸೇವಕ ಯತೀಶ್.ಎಂ ಸಿದ್ದಾಪುರ ಅವರು ನೀಡಿದ ಹಲವಾರು ಉಪಯುಕ್ತ ಪುಸ್ತಕಗಳನ್ನು ಕೊಡುಗೆಯಾಗಿ ಸ್ವೀಕರಿಸಿ ಅವರು ಮಾತನಾಡಿದರು.

ಗ್ರಾಮದ ಮುಖಂಡ ಇಂಜಿನಿಯರ್ ತಿಪ್ಪೇರುದ್ರಪ್ಪ ಮಾತನಾಡಿ ಡಾ, ಬಿ.ಆರ್ ಅಂಬೇಡ್ಕರ್ ಅವರನ್ನು ಆದರ್ಶವಾಗಿಟ್ಟು ಕೊಂಡು ಸದಾ ಅಧ್ಯಯನ ಶೀಲತೆಯನ್ನು ಬೆಳೆಸಿ ಕೊಳ್ಳಬೇಕು. ಉತ್ತಮ ಪುಸ್ತಕಗಳ ಅಧ್ಯಯನದಿಂದ ವಿವಿಧ ವಿಷಯಗಳ ಜ್ಞಾನ ಸಿಗುವುದಲ್ಲದೆ ಸಮರ್ಥ ವ್ಯಕ್ತಿತ್ವ ನಿರ್ಮಾಣ ವಾಗುತ್ತದೆ. ಆದ್ದರಿಂದ ಇದೇ ಗ್ರಾಮದ ಯತೀಶ್.ಎಂ ಸಿದ್ದಾಪುರ ಅವರು ನಮ್ಮೂರಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು. ಯತೀಶ್.ಎಂ ಸಿದ್ದಾಪುರ ಮಾತನಾಡಿ ಗ್ರಾಮದ ಗ್ರಂಥಾಲಯವನ್ನು ಗ್ರಾಮದ ಮಕ್ಕಳು ಯುವಕರು ನಾಗರೀಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಕಿವಿಮಾತು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಂಗಳಮ್ಮ ರಂಗಸ್ವಾಮಿ ವಹಿಸಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಮನು ಶ್ರೀ ಸಿದ್ದಾಪುರ ಮಾಡಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ದ್ಯಾಮಲಾಂಭಾ ತಿಪ್ಪೇಸ್ವಾಮಿ, ರೇಣುಕಮ್ಮ ದ್ಯಾಮಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಟಿ.ಗಿರಿಯಪ್ಪ, ರೆಡ್ಡಿಹಳ್ಳಿ ಮಂಜುನಾಥ, ಬಸಲಿಂಗಪ್ಪ , ಮೇಘನಾಥ ಉಪಸ್ಥಿತರಿದ್ದರು.

ವರದಿ-ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button