ವೈಭವ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ.
ಕೆ. ಹೊಸಹಳ್ಳಿ.05

ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ವೈಭವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಸಸಿಯನ್ನು ನೆಡುವುದರ ಮೂಲಕ ಆಚರಿಸಲಾಯಿತು.ಜಿ.ಬಸವರಾಜ್ ಮಾತನಾಡಿ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ದಿನವೇ ವಿಶ್ವ ಪರಿಸರ ದಿನ ಪ್ರತೀ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವ ಅರಿಯುವ ಮಹತ್ತರವಾದ ದಿನವಿದು. ಪರಿಸರ ಸಂರಕ್ಷಣೆಗೆ ನಾವು ಸ್ವಯಂ ಪ್ರೇರಿತರಾಗಿ ಗಿಡ ನೆಟ್ಟು, ನೀರು ಹಾಕಿ, ಮರಗಳನ್ನು ಬೆಳೆಸಬೇಕಿದೆ. ಪರಿಸರದ ಮೌಲ್ಯವನ್ನು ಎಲ್ಲರೂ ಅರಿತು ಕೊಂಡು ಮಲೀನ ಮಾಡದಂತೆ ಸಂರಕ್ಷಣೆ ಮಾಡುವಲ್ಲಿ ಶ್ರಮವಹಿಸ ಬೇಕಿದೆ. ವೈಭವ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಪ್ರಕಾಶ್ ಗೌಡ ಮಾತನಾಡಿ ಇನ್ನೂ ನಮ್ಮ ಆಪ್ತರ ಸಂತೋಷದ ಕ್ಷಣಗಳಿಗೆ ಕಾರಣರಾಗಲು ನಾವು ಯಾವುದೋ ಲಕ್ಷಾಂತರ ಮೌಲ್ಯದ ಉಡುಗೂರೆ ನೀಡುವ ಬದಲು ಪರಿಸರಕ್ಕೆ ಪೂರಕವಾಗುವಂತೆ ಒಂದು ಗಿಡ ಕೊಟ್ಟರೆ ಅದು ಎಲ್ಲದಕ್ಕಿಂತಲೂ ಅಮೂಲ್ಯವಾದದ್ದು ಎನಿಸಿಕೊಳ್ಳುತ್ತದೆ.

ಹೀಗೇ ಯಾವೊದೋ ಒಂದು ನೆಪದ್ಲಲಿ ಪ್ರತೀ ಮನೆಗಳಲ್ಲಿ ಒಂದು ಗಿಡ ನೆಟ್ಟರೆ ಸಾಕು, ತಾನಾಗಿಯೇ ಊರಿನಲ್ಲಿ ವನ ಸೃಷ್ಟಿಯಾಗುತ್ತದೆ. ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರಿಗೆ ಮರುಜನ್ಮ ನೀಡಿದ ಹಾಗೆ ಆಗುತ್ತದೆ ಎಂದರು. ವೈಭವ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿಗಳು, ಶಾಲೆಯ ಶಿಕ್ಷಕರು ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಶಾಲೆಯ ಎಲ್ಲಾ ಸಿಬ್ಬಂದಿಗಳು ವರ್ಗದವರು ಇತರರು ಉಪಸ್ಥಿತರಿದ್ದರು.
ಕೋಟ್…..
ವೈಭವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರವನ್ನು ನೋಡಿದರೆ ಗೊತ್ತಾಗುತ್ತದೆ ಅಲ್ಲಿನ ಶಿಕ್ಷಕರ ಹಾಗೂ ಮಕ್ಕಳ ಪರಿಶ್ರಮದ ಪರಿಸರದ ರಕ್ಷಣೆ ಪಿ.ಕೆ. ಬಸವರಾಜ್ ಸಹಶಿಕ್ಷಕರು ವೈಭವ ಆಂಗ್ಲ ಮಾಧ್ಯಮ ಶಾಲೆ ಹೊಸಹಳ್ಳಿ
ಕೋಟ್…..
ಪುನರ್ ಬಳಕೆಯಂತ ವಸ್ತುಗಳನ್ನು ಸುಮ್ಮನೆ ಬಿಸಾಡಬೇಡಿ, ಮರುಬಳಕೆ ಮಾಡಿ. ನಿಮಗೆ ಬೇಡದಿದ್ದರೆ ಇತರರಿಗಾದರೂ ದಾನ ಮಾಡಿಪ್ರತಿದಿನದ ಜೀವನದಲ್ಲಿ ಅಥವಾ ಸಮಾರಂಭಗಳ ಸಂದರ್ಭದಲ್ಲಿ ಸುಲಭದಲ್ಲಿ ಮಣ್ಣಾಗಿ ಹೋಗುವ ಪರಿಸರ ಸ್ನೇಹೀ ಉತ್ಪನ್ನಗಳನ್ನು ಬಳಸುವುದು ಮುರಳೀಧರ ಗಜೇಂದ್ರಗಡ ಸಂಸ್ಥಾಪಕ ಅಧ್ಯಕ್ಷರು ವೈಭವ ಆಂಗ್ಲ ಮಾಧ್ಯಮ ಶಾಲೆ ಹೊಸಹಳ್ಳಿ
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.