ಹೊಸಹಳ್ಳಿ ಪೋಲಿಸ್ ಪಡೆಯಿಂದ ಹೆಲ್ಮೆಟ್ ಜಾಗೃತಿ.
ಕೆ. ಹೊಸಹಳ್ಳಿ.05
ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಪೋಲಿಸ್ ಠಾಣೆಯಿಂದ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಪಿಎಸ್ಐ ಎರ್ರಿಯಪ್ಪ ಅಂಗಡಿ ಮಾತನಾಡಿ ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸುವುದರೊಂದಿಗೆ ವಾಹನದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರಿಂದ ಹಲವಾರು ಅಪಾಯಗಳಿಂದ ರಕ್ಷಣೆ ಪಡೆಯಬಹುದಾಗಿದೆ. ವಾಹನ ಚಾಲಕರು ತಮ್ಮ ಹಾಗೂ ಕುಟುಂಬದ ಸುರಕ್ಷತೆಯ ಜೊತೆಗೆ ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡುವುದು, ವಿಮೆ, ಪರವಾನಗಿ, ವಾಹನಗಳ ಎಫ್‍ಸಿ ಸೇರಿದಂತೆ ನಿಯಮಾನುಸಾರ ಕೈಗೊಳ್ಳ ಬೇಕಾದ ಎಲ್ಲ ಕ್ರಮಗಳನ್ನು ವಾಹನ ಚಾಲಕರು ಮತ್ತು ಮಾಲೀಕರು ಕೈಗೊಳ್ಳಬೇಕು ಎಂದರು. ನಮ್ಮ ಸರಹದ್ದು ರಾಷ್ಟ್ರೀಯ ಹೆದ್ದಾರಿಯಿಂದ ವಿಜಯನಗರ, ಬಳ್ಳಾರಿಯವರೆಗೂ ಪ್ರತಿ ವರ್ಷ 400 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಿರುತ್ತಾರೆ. 400 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವರರು ಹೆಲ್ಮೆಟ್ ಬಳಸಿರುವುದಿಲ್ಲ ಆದ್ದರಿಂದ ತಾವುಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸುತ್ತ ಮುತ್ತಲಿನ ಹಳ್ಳಿಯ ಮುಖಂಡರು, ವಿವಿಧ ಸಂಘ ಸಂಸ್ಥೆಯವರು, ಯುವಕರು ಹಾಗೂ ಹೊಸಳ್ಳಿಯ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.