ಶಿಬಿರದಲ್ಲಿ ಆರಾಧ್ಯ ಸಮಗ್ರ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ – ಶಿಬಿರದಲ್ಲಿ ಭಾಗಿಯಾದ ಮಕ್ಕಳಿಗೆ ಪ್ರಶಂಸನಾ ಪತ್ರ ವಿತರಣೆ.
ಹುನಗುಂದ ಜೂನ್.07

ನಗರ ಪ್ರದೇಶದ ಮಕ್ಕಳು ಹಣ ನೀಡಿ ಬೇಸಿಗೆ ಶಿಬಿರಗಳಿಗೆ ಭಾಗಿಯಾಗುತ್ತಾರೆ ಆದರೆ ಗ್ರಾಮೀಣ ಪ್ರದೇಶದ ಮಕ್ಕಳು ಬೇಸಿಗೆ ಶಿಬಿರಗಳಿಂದ ವಂಚಿತರಾಗ ಬಾರದು ಎನ್ನುವ ದೂರ ದೃಷ್ಠಿಯಿಂದ ಸರ್ಕಾರ ಸ್ವಯಂ ಸೇವಾ ಸಂಸ್ಥೆಯ ಮೂಲಕ ಗ್ರಾಮೀಣ ಬಡ ಮಕ್ಕಳಿಗೆ ಬೇಸಿಗೆಯಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣ ಕಲಿಸಲು ಮುಂದಾಗಿದ್ದು. ಈ ಕಾರ್ಯವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಆರಾಧ್ಯ ಸಮಗ್ರ ಗ್ರಾಮೀಣಾಭಿವೃದ್ದಿ ಮತ್ತು ಶಿಕ್ಷಣ ಸಂಸ್ಥೆಯ ಬಹಳಷ್ಟು ಅಚ್ಚುಕಟ್ಟಾಗಿ ಕಾರ್ಯ ಮಾಡಿದೆ ಎಂದು ಬಾಗಲಕೋಟಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಗಂಜೀಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಹಾಗೂ ಆರಾಧ್ಯ ಸಮಗ್ರ ಗ್ರಾಮೀಣಾಭಿವೃದ್ದಿ ಮತ್ತು ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸಾಕಷ್ಟು ಸ್ವಯಂ ಸೇವಾ ಸಂಸ್ಥೆಗಳು ಸರ್ಕಾರ ದಿಂದ ಏನು ಸಿಗುತ್ತೇ ಅಂತಾ ಮಾತ್ರ ನೋಡುತ್ತೇವೆ ಹೊರೆತು ಇಂತಹ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಿಲ್ಲ. ಆದರೆ ಆರಾಧ್ಯ ಸಮಗ್ರ ಗ್ರಾಮೀಣಾಭಿವೃದ್ದಿ ಸಂಸ್ಥೆಯು ಯಾವುದೇ ಸರ್ಕಾರದ ಅನುದಾನವನ್ನು ಪಡೆಯದೇ ಸ್ವಂತ ಖರ್ಚಿನಲ್ಲಿ ೧೫ ದಿನಗಳವರಗೆ ಗ್ರಾಮೀಣ ಮಕ್ಕಳಿಗೆ ಮೌಲ್ಯಾಧಾರಿತ ಮತ್ತು ಚಟುವಟಿಕೆ ಯುಕ್ತ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳಲ್ಲಿ ಹೊಸ ಚೈತನ್ಯವನ್ನು ಮೂಡಿಸಿದೆ. ಈ ಸಂಸ್ಥೆಯ ಅಧ್ಯಕ್ಷ ಮತ್ತು ನಿರ್ದೇಶಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಿಂದ ಇನ್ನೂ ಹೆಚ್ಚು ಹೆಚ್ಚು ಕಾರ್ಯಕ್ರಮಗಳು ಮೂಡಿ ಬರಲಿ ಎಂದರು.ತಾ.ಪಂ ಇ.ಓ ಶ್ರೀಮತಿ ತಾರಾ ಮಾತನಾಡಿ ಬೇಸಿಗೆ ಸಮಯದಲ್ಲಿ ಮಕ್ಕಳು ಮೋಬೈಲ್,ಟಿ.ವಿ. ದಾಸರಾಗಿ ತಮ್ಮ ಓದಿನ ಕಡೆಗೆ ಗಮನ ಹರಿಸುತ್ತಿರಲಿಲ್ಲ ಆದರೆ ಬೇಸಿಗೆಯಲ್ಲಿ ಗ್ರಾಮೀಣ ಮಕ್ಕಳಿಗೆ ೧೫ ದಿನಗಳ ಬೇಸಿಗೆ ಶಿಬಿರದಲ್ಲಿ ಅನೇಕ ಕೌಶಲ್ಯಗಳನ್ನು ಮತ್ತು ಚಟುವಟಿಗೆಗಳನ್ನು ಕಲಿಸಲಾಗಿದೆ,

ಜೊತೆಗೆ ಮನೆಯಲ್ಲೂ ಅನೇಕ ಹೋಮ್ ವರ್ಕ ಕೊಟ್ಟು ಮಕ್ಕಳನ್ನು ಮತ್ತಷ್ಟು ಓದಿನ ಕಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿ ಕಾರ್ಯವನ್ನು ಆರಾಧ್ಯ ಸಮಗ್ರ ಗ್ರಾಮೀಣಾಭವೃದ್ದಿ ಮತ್ತು ಶಿಕ್ಷಣ ಸಂಸ್ಥೆಯ ಸ್ವಯಂ ಸೇವಕರು ಮಾಡಿದ್ದಾರೆ ಅವರ ಕಾರ್ಯ ಶ್ಲಾಘನೀಯವಾದುದು ಎಂದರು. ಆರಾಧ್ಯ ಸಮಗ್ರ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ವಿಜಯಮಹಾಂತೇಶ ಮಲಗಿಹಾಳ ಮಾತನಾಡಿ ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಾವೆಲ್ಲಾ ಸಾಮಾನ್ಯ ಜ್ಞಾನ ಇರಬೇಕು ಎನ್ನುವುದರ ಕುರಿತು ಈ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಕಲಿಸಲಾಗಿದೆ. ಶಿಕ್ಷಣದ ಜೊತೆ ಸ್ಥಳೀಯವಾಗಿ ಗ್ರಾ.ಪಂ, ಅಂಚೆ ಕಚೇರಿ, ಹಾಲು ಉತ್ಪದಕರ ಸಂಸ್ಥೆ ಸೇರಿದ್ದಂತೆ ಅನೇಕ ಕಚೇರಿಗಳಿಗೆ ತೆರಳಿ ಅಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಕ್ಕಳಿಗೆ ತಿಳಿಸುವುದರ ಮೂಲಕ ಮಕ್ಕಳಲ್ಲಿ ಬೌದ್ದಿಕ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗಿಯಾದ ಎಲ್ಲ ಮಕ್ಕಳಿಗೆ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು. ಸಂಸ್ಥೆಯ ವತಿಯಿಂದ ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಮತ್ತು ತಾ.ಪಂ ಇ.ಓ ಶ್ರೀಮತಿ ತಾರಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯ ಶಾಲೆಯ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಲಾಯಿತು. ಗ್ರಾ.ಪಂ ಪಿಡಿಓ ಶಿವನಿಂಗಪ್ಪ ಹಡಲಿಟ್ಟಿ, ಶಾಲೆ ಮುಖ್ಯೋಪಾಧ್ಯಯ ರತ್ನಾ ಪರಮನಹಟ್ಟಿ, ಸುಪ್ರಿಯಾ ಸಜ್ಜನ, ಭಾವಿಕಟ್ಟಿ, ರೇಖಾ ರಂಜಣಗಿ, ಸಾವಿತ್ರಿ ಹಿರೇಕುರಬರ, ರಾಧಾ ಕಮ್ಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ ಹುನಗುಂದ.