ಮತದಾನ ಜಾಗೃತಿ ಬೈಕ್ ರ್ಯಾಲಿಗೆ ಜಿಲ್ಲಾ ಚುನಾವಣಾಧಿಕಾರಿಗಳ ಚಾಲನೆ.
ಹುನಗುಂದ ಮಾರ್ಚ್.29

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಚುನಾವಣಾ ಜಾಗೃತಿ ಅಭಿಯಾನ ಹಾಗೂ ಬೈಕ್ ರ‍್ಯಾಲಿಗೆ ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ವಾಹನಕ್ಕೆ ಚಾಲನೆ ನೀಡಿದರು. ಬಳಿಕ ಚುನಾವಣಾ ತಯಾರಿ ಸಭೆ ಜರುಗಿತು. ಸಭೆಯಲ್ಲಿ ತಾಲೂಕಿನ ಮತಗಟ್ಟೆಗಳಲ್ಲಿ ವ್ಯವಸ್ಥೆ, ಸಿ-ವಿಜಲ್, ಚೆಕ್ ಪೋಸ್ಟ್ ಗಳ ತಪಾಸಣೆ ವಿವಿಧ ಅಂಶಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಪಂ ಉಪಕಾರ್ಯದಶಿ೯ಗಳು, ಸಹಾಯಕ ಚುನಾವಣಾಧಿಕಾರಿಗಳು,ಯೋಜನಾ ನಿರ್ದೆಶಕರು(ಡಿ.ಆರ್.ಡಿ.ಎ), ಅವಳಿ ತಾಲೂಕಿನ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಸಹಾಯಕ ನಿರ್ದೇಶಕರು,ವಿವಿಧ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.