ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ – ಕಾಂಗ್ರೆಸ್ ತೆಕ್ಕೆಗೆ.
ಬಸವನ ಬಾಗೇವಾಡಿ ಏ .02

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬಸವನ ಬಾಗೇವಾಡಿ ಪಟ್ಟಣದ ಪುರಸಭೆಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಕೃಷಿ ಮಾರುಕಟ್ಟೆ ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲರ ಸ್ವಕ್ಷೇತ್ರ ಬಸವನ ಬಾಗೇವಾಡಿಯ ಪುರಸಭೆಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬಹಳ ದಿನಗಳಿಂದ ಬಾಕಿ ಇದ್ದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ತೆರೆ ಬಿದ್ದಿದೆ. ಬಸವನ ಬಾಗೇವಾಡಿಯ ಪುರಸಭೆಯ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆ ಮಾರುಕಟ್ಟ ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲರ ಸಮ್ಮುಖದಲ್ಲಿ ನಡೆದ ಆಯ್ಕೆ ಇನ್ನೂಳಿದ 6-7 ತಿಂಗಳ ಅವಧಿಗೆ ಅಧ್ಯಕ್ಷರಾಗಿ ಜಗದೇವಿ ಗುಂಡಳ್ಳಿ ಉಪಾಧ್ಯಕ್ಷರಾಗಿ ಅಶೋಕ್ ಹಾರಿವಾಳ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಸುಗಮವಾಗಿ ನಡದರೆ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿತ್ತು. ಆದರೆ ಅಶೋಕ್ ಹಾರಿವಾಳ ಅವರು 19 ಸದಸ್ಯರ ಬಲದೊಂದಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಶ್ರೀ ವೈ ಎಸ್ ಸೋಮನಕಟ್ಟಿ ತಹಸಿಲ್ದಾರರು ಚುನಾವಣಾ ಪ್ರಕ್ರಿಯೆ ನಡೆಸಿದರು. ನಂತರ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಅನೇಕ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ