ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಲ್ಲಿ ವಸತಿ ಸೌಕರ್ಯ ಕಲ್ಪಿಸಿ.
ಶೃಂಗೇರಿ ಜೂನ್.19

ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಮಾಡಿ ಕೊಡಬೇಕೆಂದು ಸರ್ಕಾರದ ಮಾರ್ಗಸೂಚಿ ಇದ್ದರೂ, ಶೃಂಗೇರಿ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ, ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 14 ಜನ ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿಯು ಇದುವರೆಗೂ ಕಲ್ಪಿಸಿರುವುದಿಲ್ಲ ಎಂದು ಸಪಾಯಿ ಕರ್ಮಚಾರಿ ಕಾವಲು ಸಮಿತಿಯ ತರೀಕೆರೆ ಎನ್ ವೆಂಕಟೇಶ್ ಅವರು ಇಂದು ಶೃಂಗೇರಿಯ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಪೌರ ಕಾರ್ಮಿಕರ ಸಭೆ ನಡೆಸಿ ಮಾತನಾಡಿದರು. ಪೌರ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕಿ, ಅಹಿಂದ ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಎಂ ವಿ ಭವಾನಿ ಪೌರ ಕಾರ್ಮಿಕರಿಗೆ ಕಾಲಕಾಲಕ್ಕೆ ಸರಿಯಾಗಿ ಮೆಡಿಕಲ್ ಚೆಕಪ್ ಮಾಡಲಾಗುತ್ತಿದೆ ಎಂದು ಕಾರ್ಮಿಕರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕರ ಸಂಘದ ಅಧ್ಯಕ್ಷರಾದ ರಮೇಶ್ ರವರು ಉಪಸ್ಥಿತರಿದ್ದು. ಜುಲೈ 1 ರಿಂದ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸುತ್ತಾ 25 ವರ್ಷಗಳಿಂದ ನೇರ ಪಾವತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಬೇಕೆಂದು ಸರ್ಕಾರದ ಗಮನಕ್ಕೆ ತರಲು ಪ್ರತಿಭಟನೆ ಧರಣಿ ಸತ್ಯಾಗ್ರಹ ಮಾಡಲು ನಿರ್ಧರಿಸುವುದಾಗಿ ತಿಳಿಸಿದರು.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್ ತರೀಕೆರೆ. ಚಿಕ್ಕ ಮಗಳೂರು