ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.
ದೇವರ ಹಿಪ್ಪರಗಿ ಜೂನ್.20

ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಪಟ್ಟಣದಲ್ಲಿ ಇರುವ ರಾಷ್ಟ್ರಹೆದ್ದಾರಿ ಯನ್ನು ಬಂದಮಾಡಿ ಬೈಕ್ ಗೆ ಹಗ್ಗ ಕಟ್ಡಿ ಎಳೆಯುವ ಮುಖಾಂತರ ಪ್ರತಿಭಟನೆ ಮಾಡಿದರು. ಈ ಪ್ರತಿಭಟನೆಯ ನೇತೃತ್ವವಹಿಸಿ ಮಾತಾನಾಡಿ ದೇವರ ಹಿಪ್ಪರಗಿಯ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಸುಳ್ಳು ಹೇಳುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಜನರಿಗೆ ಬೆಲೆ ಏರಿಕೆ ಬರೆ ಎಳೆಯುತ್ತದೆ ,ಕೂಡಲೇ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,

ಈ ಪ್ರತಿಭಟನೆಯಲ್ಲಿ ಆಗಮಿಸಿದ ಕಂದಾಯ ಇಲಾಖೆಯ ಅಧಿಕಾರಿಗಳಾದ ಸುರೇಶ ಮೌಗೇರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು, ಈ ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಅವ್ವಣ್ಷ ಗ್ವಾತಗಿ, ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ ದೊಡ್ಡಮನಿ ಮಹಾಂತೇಶ ಬಿರಾದಾರ ಹಾಗೂ ಮಂಡಲ ಎಲ್ಲಾ ಮೊರ್ಚಾದ ಅಧ್ಯಕ್ಷರು ಹಾಗೂ ಮಂಡಲದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪ್ರತಿಭಟನೆ ಯಲ್ಲಿ ಭಾಗವಹಿಸಿದರು.
ತಾಲೂಕ ವರದಿಗಾರರು ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ ಹಚ್ಯಾಳ ದೇವರ ಹಿಪ್ಪರಗಿ.