ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವಿಶ್ವ ಪರಿಸರ ದಿನಾಚರಣೆ ನಿಮಿತ್ತವಾಗಿ – ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ನಾಟಿ ಕಾರ್ಯಕ್ರಮ ಜರುಗಿತು.
ಬೇವಿನಮಟ್ಟಿ ಜೂ.06

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೇವಿನಮಟ್ಟಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ವಿಶ್ವ ಪರಿಸರ ದಿನಾಚರಣೆ ನಿಮಿತ್ಯವಾಗಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಒಂದು ಕಾರ್ಯಕ್ರಮದಲ್ಲಿ ಬಾಗಲಕೋಟ ಜಿಲ್ಲೆಯ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಶಶಿಧರ್ ಕುರೆರ ಸರ್ ಗಿಡ ನಾಟಿ ಮಾಡುವುದರ ಮೂಲಕ ಚಾಲನೆ ನೀಡಿ ಧರ್ಮಸ್ಥಳ ಗ್ರಾಮಾಭಿೃದ್ಧಿ ಯೋಜನೆ ಒಂದು ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.

ಈ ಒಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಶಾಂತ್ ಕುಮಾರ್ ಬಾದ್ವಾಡಗಿ ವಹಿಸಿ ಕೊಂಡಿದ್ದು ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ನಾವೆಲ್ಲರೂ ಪರಿಸರವನ್ನು ಸಂರಕ್ಷಿಸ ಬೇಕೆಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಗಳಾದ ಸಂತೋಷ ಸರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುನುಗುಂದ ತಾಲೂಕಿನಲ್ಲಿ ಪ್ರತಿ ವರ್ಷವೂ ಶಾಲಾ ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 1000 ಸಾವಿರ ಗಿಡ ನಾಟಿಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿಗಳಾದ ಶಿವಶಂಕರ್.ಬಿ ಸರ್ ಅವರು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕೋಣ ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗೋಣ ಎಂದು ತಿಳಿಸಿದರು. ಕೃಷಿ ಮೇಲ್ವಿಚಾರಕರಾದ ಆನಂದ್ ಪಡಸಲಗಿ ಸ್ವಾಗತ ನೀಡಿದರು. ವಲಯ ಮೇಲ್ವಿಚಾರಕರಾದ ಅರುಣ್ ಕುಮಾರ ನಿರೂಪಣೆ ಮಾಡಿದರು. ಶಾಲೆಯ ಸಿಬ್ಬಂದಿ ವರ್ಗ ಸಂಘದ ಸದಸ್ಯರು ಶೌರ್ಯ ಘಟಕದ ಸ್ವಯಂ ಸೇವಕರು ಮುದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

