ಪರಿಸರ ರಕ್ಷಣೆಯಿಂದ ಉತ್ತಮ ಆರೋಗ್ಯ ವೃದ್ಧಿ – ಶಿಕ್ಷಕ ಮಂಜುನಾಥ್.
ಸಿದ್ದಾಪುರ ಜೂನ್.24

ಕಾನ ಹೊಸಹಳ್ಳಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಂಡು ಮರ ಗಿಡಗಳನ್ನು ಬೆಳೆಸಿ ಉತ್ತಮ ವಾತಾವರಣ ನಿರ್ಮಾಣ ಮಾಡಿ ಕೊಟ್ಟರೆ ಉತ್ತಮ ಆರೋಗ್ಯವನ್ನು ಕಾಪಾಡಿ ಕೊಳ್ಳಲು ಸಾಧ್ಯವಿದೆಯೆಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ್ ತಿಳಿಸಿದರು. ಗುಂಡು ಮುಣುಗು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿದ್ದಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಪರಿಸರ ಸಂರಕ್ಷಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ನಾವು ವಾಸ ಮಾಡುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ ಇದು ಮಾನವನ ಸಾಮಾಜಿಕ, ಮಾನಸಿಕ ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛವಾಗಿರಿಸಿ ಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಹೊಣೆಯಾಗಿದೆ. ಆದ್ದರಿಂದ ಸಸಿಗಳನ್ನು ನೆಟ್ಟು ಗಿಡ ಮರಗಳನ್ನು ಬೆಳೆಸಿ ಒಳ್ಳೆಯ ವಾತಾವರಣವನ್ನು ನಿರ್ಮಿಸೋಣ ಉತ್ತಮ ಆರೋಗ್ಯವಂತರಾಗಿ ಬಾಳೋಣ ಎಂದು ಈ ಕಾರ್ಯಕ್ರಮ ಕುರಿತು ಮಾತನಾಡಿದರು. ಈ ಕಾರ್ಯಕ್ರಮ ಕುರಿತು ಧರ್ಮಸ್ಥಳ ಸಂಘದ ತಾಲೂಕು ಕೃಷಿ ಮೇಲ್ವಿಚಾರಕ ಮಹಾಲಿಂಗಯ್ಯ ಮಾತನಾಡಿ ಹಾಗೂ ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಮಮತಾ. ಗ್ರಾಪಂ ಸದಸ್ಯರಾದ ಗಂಗಮ್ಮ. ಮುಖ್ಯ ಶಿಕ್ಷಕ ಬಸವರಾಜ್. ಚಿಕ್ಕಜೋಗಿಹಳ್ಳಿ ವಲಯದ ಮೇಲ್ವಿಚಾರಕಿ ರೇಣುಕ. ಶಾಲೆಯ ಸಹ ಶಿಕ್ಷಕರುಗಳಾದ ಲಕ್ಷ್ಮಿ ದೇವಿ, ಶೃತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸ್ಥಳೀಯ ಪ್ರತಿ ನಿಧಿಗಳು ಶಾಲಾ ಮಕ್ಕಳು ಇತರರು ಇದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.