“ಈ ಪಾದ ಪುಣ್ಯ ಪಾದ” ಚಲನ ಚಿತ್ರದ ಟೈಟಲ್ ಬಿಡುಗಡೆ.

ಬೆಂಗಳೂರು ಜೂನ್.25

ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಕನ್ನಡ ಚಲನ ಚಿತ್ರ “ಈ ಪಾದ ಪುಣ್ಯ ಪಾದ” ಎಂಬ ಚಲನ ಚಿತ್ರದ ಟೈಟಲನ್ನು ಖ್ಯಾತ ನಿರ್ದೇಶಕರಾದ “ಶಶಾಂಕ್” ರವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿ ಯಾಗಲಿ ಎಂದು ಚಿತ್ರ ತಂಡಕ್ಕೆ ಶುಭ ಕೋರಿದರು. ದಾರಿ ಯಾವುದಯ್ಯಾ ವೈಕುಂಠಕೆ, ಬ್ರಹ್ಮ ಕಮಲ, ತಾರಿಣಿ ಮುಂತಾದ ಸದಭಿರುಚಿ ಚಿತ್ರಗಳನ್ನು ನಿರ್ದೇಶನ ಮಾಡಿ ಹಲವಾರು ಚಲನ ಚಿತ್ರ ಪ್ರಶಸ್ತಿ ಮುಡಿಗೇರಿಸಿ ಕೊಂಡು ಸೈ ಎನಿಸಿ ಕೊಂಡಿರುವ “ಸಿದ್ದು ಪೂರ್ಣಚಂದ್ರ” ರವರು ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.ಈ ಕಥೆಯ ವಿಶೇಷವೇನೆಂದರೆ ಕಾಲುಗಳ ಮೇಲೆ ಕಥೆ ಬರೆಯಲಾಗಿದೆ. ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಮಗುವಿನ ಪಾದ, ದೊಡ್ಡವರ ಪಾದ, ವಯಸ್ಸಾದ ಪಾದ, ಧಣಿದ ಪಾದ, ಖುಷಿಯ ಪಾದ, ಪಾಪದ ಪಾದ, ಆನೆಕಾಲು ರೋಗಿಯ ಪಾದ ಹೀಗೆ ನಾನಾ ಪಾದಗಳಿಂದ ಕೂಡಿದ ವಿನೂತನ ಕಥಾ ಹಂದರ ಹೊಂದಿರುವ ಚಿತ್ರವಾಗಿದೆ.

ಮುಖ್ಯಪಾತ್ರದಲ್ಲಿ ಆಟೋ ನಾಗರಾಜ್, ಮಮತಾ ರಾಹುತ್, ಪ್ರಭಾಕರ್ ಬೋರೇಗೌಡ, ಪ್ರಮಿಳಾ ಸುಬ್ರಹ್ಮಣ್ಯಂ, ಹರೀಶ್ ಕುಂದೂರ್, ಸನ್ನಿ, ಇನ್ನೂ ಮುಂತಾದವರ ತಾರಾಗಣವಿದೆ. ಛಾಯಾಗ್ರಹಣ ರಾಜು ಹೆಮ್ಮಿಗೆಪುರ, ಸಂಗೀತ ಅನಂತ್ ಆರ್ಯನ್, ಸಂಕಲನ ದೀಪಕ್, ವಸ್ತ್ರ ವಿನ್ಯಾಸ ನಾಗರತ್ನ ಕೆ ಹೆಚ್, ಪ್ರೊಡಕ್ಷನ್ ಡಿಸೈನ್ ದಿಲೀಪ್ ಹೆಚ್ ಆರ್, ಕಾರ್ಯಕಾರಿ ನಿರ್ಮಾಪಕರು ಪುಟ್ಟರಾಜು ಎ ಕೆ ಆಲಗೌಡನ ಹಳ್ಳಿ ಮತ್ತು ಕಲಾ ನಿರ್ದೇಶನ ಬಸವರಾಜ್ ಆಚಾರ್. ಪಿಆರ್‌ಓ ಸುಧೀಂದ್ರ ವೆಂಕಟೇಶ, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಸ್ಟ್‌ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ಬೆಂಗಳೂರು ರಾಮನಗರ, ಚನ್ನಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಚಿತ್ರೀಕರಣವಾಗುತ್ತದೆ ಎಂದು ನಿರ್ದೇಶಕ ಸಿದ್ದು ಪೂರ್ಣಚಂದ್ರ ತಿಳಿಸಿದ್ದಾರೆ.

*****

ವರದಿ: -ಡಾ.ಪ್ರಭು ಗಂಜಿಹಾಳ

ಮೊ : 9448775346

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button