ಅಮೃತ ಸರೋವರ ದಡದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ.
ಸೂಳೇಭಾವಿ ಜೂನ್.2
![](https://i0.wp.com/sknewskannada.in/wp-content/uploads/2024/06/IMG-20240627-WA00541.jpg?resize=708%2C362&ssl=1)
ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಮೃತ ಸರೋವರ ದಡದಲ್ಲಿ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಉಸಿರಾಟದ ವ್ಯಾಯಮಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ ಸೇರಿದಂತೆ ವಿವಿಧ ರೀತಿಯ ವಿವಿಧ ಆಸನಗಳನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಮಹಾಂತೇಶ್ ಕೋಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳೋಳ್ಳಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ತಾಂತ್ರಿಕ ಸಹಾಯಕ ಲಾಲಸಾಬ್ ಗುರಗುಣ್ಣಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹುಲಗಪ್ಪ ಕುರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಂಕರಾನಂದ ಹುಣಶ್ಯಾಳ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಪಂ ಸಿಬ್ಬಂದಿ ವರ್ಗ, ಶಾಲಾ ಮಕ್ಕಳು ಉಪಸ್ಥಿತರಿದ್ದರು.