ಹುನಗುಂದ ತಾಲೂಕ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದಲ್ಲಿ – ಸಾರ್ವಜನಿಕರಿಂದ ಅಹವಾಲುಗಳ ಮಹಾಪುರ.

ಹುನಗುಂದ ಜೂನ್.27

ಪಟ್ಟಣದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ತಾಲೂಕ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರಿಂದ ಅಹವಾಲುಗಳ ಮಹಾಪುರ ಹರಿದು ಬಂದವು.ಗುರುವಾರ ತಾಲೂಕ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ, ಚರಂಡಿ,ಕುಡಿಯುವ ನೀರು,ಮುಳಗಡೆ ಗ್ರಾಮಗಳಲ್ಲಿರುವ ಮೂಲಭೂತ ಸೌಕರ್ಯಗಳ ಒದಗಿಸುವುದು, ರೈತರ ಸಮಸ್ಯೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ೧೦೦ ಕ್ಕೂ ಹೆಚ್ಚು ಸಮಸ್ಯೆಗಳ ಅಹವಾಲುಗಳನ್ನು ಜನರಿಂದ ಸ್ವೀಕರಿಸಿ ಒಂದು ವಾರದಲ್ಲಿಯೇ ಇತ್ಯರ್ಥ ಪಡಿಸಿ ಅರ್ಹ ಫಲಾನುಭವಿಗಳಿಗೆ ಉತ್ತರ ನೀಡುವ ತಿರ್ಮಾನವನ್ನು ತಗೆದು ಕೊಳ್ಳಲಾಯಿತು.ಕರ್ನಾಟಕ ವೀರಶೈವ ಮತ್ತು ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಜನ ಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜನರಿಂದ ಆಯ್ಕೆಗೊಂಡ ನಮ್ಮ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಈ ಜನ ಸ್ಪಂದನಾ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು, ಬಡಬಗ್ಗರು, ಮಹಿಳೆಯರು ನೀಡಿರುವ ಅಹವಾಲುಗಳಿಗೆ ಸಂಬಂಧಿಸಿದ ನಮ್ಮ ಇಲಾಖೆಗಳ ಅಧಿಕಾರಿಗಳು ಅವುಗಳನ್ನು ಜವಾಬ್ದಾರಿತವಾಗಿ ಪರಿಶೀಲಿಸಿ ತಮ್ಮ ಸಮಸ್ಯಗಳಿಗೆ ಒಂದು ವಾರದಲ್ಲಿಯೇ ನ್ಯಾಯವನ್ನು ಒದಗಿಸುವ ಕಾರ್ಯವನ್ನು ಮಾಡುತ್ತಾರೆ. ಇನ್ನು ರಾಜ್ಯದಲ್ಲಿ ನಮ್ಮ ಮುಖ್ಯಮಂತ್ರಿಗಳು ಸಹ ಪ್ರತಿ ಮೂರು ತಿಂಗಳಿಗೊಮ್ಮೆ ನೇರವಾಗಿ ಜನರ ಸಮಸ್ಯೆಗಳನ್ನು ಕೇಳುವ ಕಾರ್ಯವನ್ನು ಮಾಡುತ್ತಿದ್ದಾರೆ. ಅವರ ಆದೇಶದ ಮೇಲೆ ಜಿಲ್ಲೆ ಹಾಗೂ ತಾಲೂಕ ಮಟ್ಟದಲ್ಲಿ ಕಡ್ಡಾಯವಾಗಿ ಜನ ಸ್ಪಂದನಾ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ.

ಇನ್ನು ಮುಂದೆ ತಾಲೂಕ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಗ್ರಾ.ಪಂ ಮಟ್ಟದಲ್ಲಿ ಜನ ಸ್ಪಂದನಾ ಕಾರ್ಯಕ್ರಮ ನಡೆಸಿ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿ ಇತ್ಯರ್ಥ ಪಡಿಸುವ ಕಾರ್ಯವನ್ನು ಮಾಡಲಾಗುವುದು ಎಂದರು.ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸಬೇಕು ಎನ್ನುವುದು ಮುಖ್ಯಮಂತ್ರಿಗಳ ಆಶಯವಾಗಿದ್ದು. ಈ ಕಾರ್ಯಕ್ರಮವನ್ನು ಗ್ರಾಮೀಣ ಮಟ್ಟಕ್ಕೆ ಕೊಂಡ್ಯೋಯಬೇಕು ಎನ್ನುವ ಆಶಯವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಇಂಗಿತವನ್ನು ವ್ಯಕ್ತಪಡಿಸಿದ್ದು. ಅಧಿಕಾರಿ ವರ್ಗ ಜನರ ಸೇವಕರು ಜನ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಇವತ್ತು ಬಹುಪಾಲು ಸಮಸ್ಯೆಗಳು ರಸ್ತೆ, ಯುಕೆಪಿ ಇಲಾಖೆಗಳಿಗೆ ಸಂಬಂಧ ಪಟ್ಟಿದ್ದು, ಕಂದಾಯ ಇಲಾಖೆಗಳ ದಾಖಲೆಗಳ ತಿದ್ದುಪಡೆಗೆ ಸಂಬಂಧಿಪಟ್ಟದ್ದು ಹಾಗೂ ಮೂಲಭೂತ ಸೌಲಭ್ಯಗಳ ಸಂಬಂಧಿಸಿದ ೧೦೦ ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ನಿಗಧಿತ ಅವಧಿಯಲ್ಲಿ ಸಮಸ್ಯೆಗಳಿಗೆ ಉತ್ತರ ನೀಡುವ ಕಾರ್ಯವನ್ನು ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸಾರ, ತಹಶೀಲ್ದಾರ ನಿಂಗಪ್ಪ ಬಿರಾದಾರ, ತಾ.ಪಂ ಇಓ ಮುರಳೀಧರ ದೇಶಪಾಂಡೆ, ಬಿಇಓ ಜಸ್ಮೀನ ಕಿಲ್ಲೇದಾರ, ಸಿಪಿಐ ಸುನೀಲ ಸವದಿ, ಪುರಸಭೆ ಮುಖ್ಯಾಧಿಕಾರಿ ಪಿ.ಕೆ.ಗುಡದಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.

“ಬಾಕ್ಸ್ ಸುದ್ದಿ”-

ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಬಂದ ಅರ್ಜಿಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆಯನ್ನು ತಾಳಲಾರದೇ ಜವಾಬ್ದಾರಿಯುತವಾಗಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ನೀಡಿದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಲ್ಲಿಕಾರ್ಜುನ.ಎಂ. ಬಂಡರಗಲ್ಲ ಹುನಗುಂದ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button