ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ.
ಕೊಟ್ಟೂರು ಜೂನ್.29

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದ ದಿನಾಂಕ 29 ಜೂನ್ 2024 ರಂದು ಕೊಟ್ಟೂರು ಯೋಜನಾ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಭಾಗಿರತಿ ಪದವಿ ಪೂರ್ವ ಕಾಲೇಜ್ ಸಹಭಾಗಿತ್ವದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ಯವರಾದ ನವೀನ್ ಕುಮಾರ್ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಟ ಪರಿಣಾಮಗಳ ಬಗ್ಗೆ ತಿಳಿಸಿದರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಮದ್ಯ ವರ್ಜನಾ ಶಿಬಿರಗಳನ್ನು ಮಾಡಲಾಗುತ್ತಿದೆ. ಮೂಗ ಬಸವೇಶ್ವರ ಆಸ್ಪತ್ರೆಯ ವೈದ್ಯರಾದಂತಹ ಡಾ// ಮೂಗಬಸಪ್ಪ ರವರು ಬಿಡಿ, ಸಿಗರೇಟ್ ಸೇವನೆ, ಮದ್ಯಪಾನ, ಡ್ರಗ್ಸ್ ಸೇವನೆ ಯಿಂದ ಕ್ಯಾನ್ಸರ್ ಕಾಯಿಲೆ ಬರುತ್ತದೆ ಇದನ್ನು ವಾಸಿ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ಮಕ್ಕಳು ಓದಿನ ಕಡೆ ಹೆಚ್ಚು ಗಮನ ನೀಡಬೇಕು ಅಮಲು ಪದಾರ್ಥಗಳ ಬಗ್ಗೆ ಗಮನ ನೀಡ ಬಾರದೆಂದು ತಿಳಿಸಿದರು, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ರೇವಣ ಸಿದ್ದಪ್ಪರವರು ಮಕ್ಕಳಲ್ಲಿ ಮಾದಕ ವಸ್ತುಗಳ ಸೇವನೆ ಯಿಂದ ಸಮಾಜದಲ್ಲಿ ಗೌರವ ಸಿಗುವುದಿಲ್ಲವೆಂದು ತಿಳಿಸಿದರು, ಶ್ರೀಮತಿ ನಿರ್ಮಲ ಶಿವನಗುತ್ತಿಯವರು ಮಕ್ಕಳು ಮಾದಕ ವಸ್ತುಗಳನ್ನು ಸೇವನೆ ಮಾಡಿ ದುಶ್ಚಟಕ್ಕೆ ಬಲಿಯಾಗಿ ವಿದ್ಯಾಭ್ಯಾಸವನ್ನು ಹಾಳು ಮಾಡಿಕೊಳ್ಳದೆ ಮನೆಯಲ್ಲಿ ಒಳ್ಳೆಯ ಸಂಸ್ಕಾರ ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿ ಆಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ರುದ್ರೇಶ್, ಕೃಷಿ ಅಧಿಕಾರಿ ಮಹಾಂತೇಶ, ಸೇವಾ ಪ್ರತಿ ನಿಧಿಗಳಾದ ಸುಧಾ, ಲಕ್ಷ್ಮಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್ ಕುಮಾರ್ ಸಿ ಕೊಟ್ಟೂರು.