ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ.

ಬೆಳಗಾವಿ ಜು.05

ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ(ಜು.5) ಅಧಿಕಾರ ವಹಿಸಿ ಕೊಂಡರು.ನಿಕಟ ಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.2015 ನೇ. ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವಿ ಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿರುತ್ತಾರೆ.

ಕಳೆದ ಎರಡು(5-5-2022) ವರ್ಷಗಳಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಡಳಿತಲ್ಲಿ ಚುರುಕು ತಂದಿದ್ದ ನಿತೇಶ್ ಪಾಟೀಲ ಅವರು, ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಗೊಂಡಿರುತ್ತಾರೆ.ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭ ಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಬರ ಮಾಡಿ ಕೊಂಡರು.ಪ್ರೊಬೇಷನರಿ ಐ.ಎ.ಎಸ್. ದಿನೇಶ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ. ಶರ್ಮಾ ಬೆಳಗಾವಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button