ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸ್ಮಾರ್ಟ್ ಕ್ಲಾಸ್ ಆರಂಭ – ಶಾಸಕ ಕಾಶಪ್ಪನವರ.
ಧನ್ನೂರ ಜು.09

ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶ ದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ಟಾಟ್‌ಕ್ಲಾಸ್ ಹಾಗೂ ಗಣಕಯಂತ್ರ ಉದ್ಘಾಟಿಸಿ ಮಾತನಾಡಿದ ಅವರು, ಎಲ್‌ಕೆಜಿ ಯುಕೆಜಿಯಿಂದ ಕಾಲೇಜು ಮಟ್ಟದವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ಸಿಗುತ್ತದೆ. ಬಡ ಮಕ್ಕಳು ಸಾಲ ಮಾಡಿ ಖಾಸಗಿ ಶಾಲೆಗಳಿಗೆ ಮಾರು ಹೋಗಬಾರದೆಂದು ಚಿಂತನೆ ಮಾಡಿರುವ ಸರ್ಕಾರ ಗ್ರಾಮೀಣ ಶಾಲೆಗಳಿಗೂ ಸಹಿತ ಹಲವಾರು ಯೋಜನೆಗಳ ಮೂಲಕ ಗುಣಮಟ್ಟದ ಪಬ್ಲಿಕ್ ಶಾಲೆ ತೆರೆಯುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಸರ್ಕಾರದ ಖನಿಜ ನಿಧಿಯಲ್ಲಿ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಶಿಥಿಲಾವಸ್ಥೆಯಲ್ಲಿ ಇರುವ ಅನೇಕ ಸರ್ಕರಿ ಶಾಲೆಗಳಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ತರುವುದಾಗಿ ಶಾಸಕರು ಭರವಸೆ ನೀಡಿದರು. ಈ ದಿಶೆಯಲ್ಲಿ ಮಕ್ಕಳು ಗುಣಮಟ್ಟದಿಂದ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗುವಂತೆ ಮಾಡಲಾಗುವುದು ಮತ್ತು 1986 ರಲ್ಲಿ ನಿರ್ಮಾಣವಾದ ಪುನರ್ವಸತಿ ಕೇಂದ್ರದಲ್ಲಿ ಶಿಥಿಲಾವಸ್ಥೆಯ ಶಾಲೆಗಳನ್ನು ಪುನರ್ ನಿರ್ಮಿಸಲಾಗುವುದು. ಅಲ್ಲೀನ ದೇವಸ್ಥಾನ ನಿರ್ಮಾಣ, ಸ್ಮಶಾನ ಹಾಗೂ ಇನ್ನಿತರ ಮೂಲಭೂತ ಸೌಕರ್ಯ ಒದಗಿಸುವಂತೆ ಇಲಾಖೆ ಅಧಿಕಾರಿಗಳನ್ನು ಈಗಾಗಲೆ ಸಂಪರ್ಕಿಸಲಾಗಿದೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಕ್ರಪ್ಪ ಹೂಗಾರ ಪ್ರಾಸ್ತಾವಿಕ ಮಾತನಾಡಿದರು. ಮುಖಂಡ ಆನಂದ ಶಿರಹಟ್ಟಿ, ಪ್ರಭು ಗೌಂಡಿ, ಪಂಚಯ್ಯ ಹಿರೇಮಠ, ದೊಡ್ಡನಗೌಡ ಅರಿಶೀಬೀಡಿ, ಇಬ್ರಾಹಿಂಸಾಬ ಭಾವಿಕಟ್ಟಿ, ರಮೇಶ ಕುಲಕರ್ಣಿ, ಮುಖ್ಯೋದ್ಯಾಯ ಮಂಗಳಾ ಕೋಟಿ ಮತ್ತಿತರರು ಉಪಸ್ಥಿತರಿದ್ದರು. ಪ್ರಾಚಾರ್ಯ ವೀರಣ್ಣ ತೊಂಡಿಹಾಳ ಸ್ವಾಗತಿಸಿದರು. ಶಿಕ್ಷಕಿ ಮಂಜುಳಾ ಮಣಿ ನಿರೂಪಿಸಿದರು. ಅನ್ನಪೂರ್ಣ ಮಂಕಣಿ ವಂದಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ.