ಮುಂಬರುವ ದಿನಗಳಲ್ಲಿ ಪಟ್ಟಣ ಇನ್ನಷ್ಟು ಅಭಿವೃದ್ಧಿ ಯಾಗಲಿದೆ ಎಂದ – ಸಚಿವ ಶಿವಾನಂದ ಪಾಟೀಲ.
ಬಸವನ ಬಾಗೇವಾಡಿ ಜ.04

ಬಸವನ ಬಾಗೇವಾಡಿ ಬಸವ ಭಕ್ತರ ಬಹು ದಿನಗಳ ಬೇಡಿಕೆಯಾಗಿದ್ದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಾಗಿದೆ. ಮುಂಬರುವ ದಿನಗಳಲ್ಲಿ ಪಟ್ಟಣ ಇನ್ನಷ್ಟು ಅಭಿವೃದ್ಧಿ ಯಾಗಲಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ಬಸವನ ಬಾಗೇವಾಡಿ ಪಟ್ಟಣದಲ್ಲಿ ತಾಲೂಕ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಯೋಗಾಲಯ ಉದ್ಘಾಟಿಸಿ ಹಾಗೂ ಪುರಸಭೆಯ ವಿವಿಧ ಯೋಜನೆ ಅಡಿಯಲ್ಲಿ 9.17 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉತ್ತಮ ವ್ಯಾಪಾರದ ಹಿತ ದೃಷ್ಟಿಯಿಂದ ಪಟ್ಟಣದಲ್ಲಿ ₹ 40 ಕೋಟಿ ವೆಚ್ಚದಲ್ಲಿ 130 ಕ್ಕೂ ಅಧಿಕ ಮಳಿಗೆ ಹೊಂದಿದ ಜಿಲ್ಲೆಯಲ್ಲಿಯೇ ಮಾದರಿಯಾದ ಮೆಗಾಮಾರುಕಟ್ಟೆ ನಿರ್ಮಿಸಲಾಗಿದೆ. ಇದು ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಅನುಕೂಲ ಕಲ್ಪಿಸುತ್ತದೆ. ಮುಂದಿನ ದಿನಗಳಲ್ಲಿ ಮೆಗಾ ಮಾರುಕಟ್ಟೆಗೆ ಬಸವೇಶ್ವರ ಮಾರುಕಟ್ಟೆ ಎಂದು ನಾಮಕರಣ ಮಾಡಲಾಗುವುದು ಎಂದರು. ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕತಾಲೂಕು ಆಸ್ಪತ್ರೆ ಕಳೆದ ಮೂರು ವರ್ಷದಿಂದ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಗುಣಮಟ್ಟದ ಚಿಕಿತ್ಸೆಯನ್ನು ಜನತೆ ಪಡೆದು ಕೊಳ್ಳಬಹುದು. ಈ ಭಾಗದ ಜನರ ಬಹು ದಿನಗಳ ಬೇಡಿಕೆ ಯಾಗಿರುವ ಕಂದಾಯ ಉಪ ವಿಭಾಗಾಧಿಕಾರಿಗಳ ಕಚೇರಿ ಸ್ಥಾಪನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಈಗಾಗಲೇ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಸಂಗಮೇಶ ಓಲೇಕಾರ, ಶಿವನಗೌಡ ಬಿರಾದಾರ, ತಹಶೀಲ್ದಾರ ವೈ.ಎಸ್ ಸೋಮನಕಟ್ಟಿ, ಡಿ.ಎಚ್.ಓ ಸಂಪತ್ತ ಗುಣಾರಿ, ಡಾ, ಸಾಬೀರ ಪಟೇಲ, ಈ ಸಮಯದಲ್ಲಿ ಪುರಸಭೆ ಸದಸ್ಯರು ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಊರಿನ ಗುರು ಹಿರಿಯರು ಉಪಸಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ