ಸಚಿವ ಸ್ಥಾನದ ಆಕಾಂಕ್ಷಿಯಲ್ಲ – ಶಾಸಕ ಡಾ, ಎನ್.ಟಿ. ಶ್ರೀ ನಿವಾಸ್ ಸ್ಪಷ್ಟನೆ.
ಕೂಡ್ಲಿಗಿ ಜು.17

ವಿಧಾನ ಸಭಾ ಕ್ಷೇತ್ರದಲ್ಲಿ ಎಲ್ಲಾ ಮತದಾರ ಮುಖಂಡರ ಪ್ರೀತಿ ವಿಶ್ವಾಸ ದಿಂದ ಮೊದಲ ಬಾರಿಗೆ ನಾನು ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಜನ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದಲ್ಲಿ ಸೇವೆ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ವೃತ್ತಿಯಲ್ಲಿ ವೈದ್ಯನಾಗಿದ್ದ ರಿಂದ ರಾಜಕೀಯದಲ್ಲಿ ಸಾಕಷ್ಟು ಕಲಿಯುವುದು ಅವಶ್ಯಕತೆ ಇದೆ. ರಾಜಕೀಯದಲ್ಲಿ ಕೆಲವೊಂದು ಜವಾಬ್ದಾರಿ ಸ್ಥಾನ ನಿರ್ವಹಿಸ ಬೇಕೆಂದರೆ ಅನುಭವ ಬೇಕು. ನನಗೆ ರಾಜಕೀಯದಲ್ಲಿ ಸ್ವಲ್ಪ ಅನುಭವ ಕೊರತೆ ಇದೆ ಎಂಬುದು ನನ್ನ ಭಾವನೆ. ನನ್ನ ಉದ್ದೇಶ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ನನಗೆ ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ನನ್ನ ಮೇಲಿನ ಪ್ರೀತಿ ವಿಶ್ವಾಸ ದಿಂದ ಕ್ಷೇತ್ರದ ಅಭಿಮಾನ ದಿಂದ ನಮ್ಮ ಕ್ಷೇತ್ರದ ಛಲವಾದಿ ಮಹಾಸಭಾ ಪದಾಧಿಕಾರಿಗಳು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿರುವುದು. ಪತ್ರಿಕೆಗಳಲ್ಲಿ ವರದಿ ಬಂದ ನಂತರವೇ ನನಗೆ ಗೊತ್ತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆ ಇರಲಿ. ನಾನು ಇನ್ನೂ ಆ ದೊಡ್ಡ ಮಟ್ಟಕ್ಕೆ ರಾಜಕೀಯದಲ್ಲಿ ಬೆಳೆದಿಲ್ಲ ಮೊದಲ ಬಾರಿ ಪಾದರ್ಪಣೆ ಈ ಕ್ಷೇತ್ರದ ಶಾಸಕ ನಾಗಿದ್ದೇನೆ ರಾಜಕೀಯ ಕ್ಷೇತ್ರದಲ್ಲಿ ನಮ್ಮ ವಾಲ್ಮೀಕಿ ಸಮುದಾಯದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಹಿರಿಯ ಶಾಸಕರಿದ್ದಾರೆ. ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ಶಾಸಕ ಡಾ ಎನ್.ಟಿ ಶ್ರೀನಿವಾಸ್ ಸ್ಪಷ್ಟನೆ ನೀಡಿದ್ದಾರೆ.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್ ಕೆ. ಹೊಸಹಳ್ಳಿ.