ಎಂ.ಎಸ್.ಬಿ.ಎನ್ ಪ್ರಾಥಮಿಕ ಶಾಲಾ ಮಕ್ಕಳು – ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಮುದ್ದೇಬಿಹಾಳ ಸ.10





ತಾಲ್ಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬಿಜ್ಜೂರು ಗ್ರಾಮದಲ್ಲಿ ಮಂಗಳವಾರ ಜರುಗಿತು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಾದ ಕುಮಾರಿ ಸವಿತಾ ಟಕ್ಕಳಕಿ 100 ಮೀ, 200 ಮೀ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರ ಬಸವರಾಜ ಹಾದಿಮನಿ ಎತ್ತರ ಜಿಗೀತ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾದಿಕಾರಿಗಳು, ದೈಹಿಕ ಶಿಕ್ಷಕರು, ಮುಖ್ಯ ಗುರುಗಳು ಹಾಗೂ ಆಡಳಿತ ವರ್ಗ, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.