ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ ಜಯಂತಿಯನ್ನು ಸರಳ ಆಚರಣೆ.
ಕೂಡ್ಲಿಗಿ ಏಪ್ರಿಲ್.03

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಲೂಕಾ ದಂಡಧಿಕಾರಿಗಳು ರಾಷ್ಟ್ರೀಯ ಹಬ್ಬಗಳ ಆಚರಣೆಯ ಅಧ್ಯಕ್ಷರ ಆದೇಶದಂತೆ ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಮೆರವಣಿಗೆಗಳು ಹಾಗೂ ಸಭೆ ಸಮಾರಂಭಗಳನ್ನು ನೆಡೆಸಲು ಅವಕಾಶ ಇಲ್ಲದಿರುವ ಕಾರಣ ಕೂಡ್ಲಿಗಿ ಪಟ್ಟಣದಲ್ಲಿ ದಿನಾಂಕ 5-4 -2024 ರಂದು ಹಸಿರು ಕ್ರಾಂತಿಯ ಹರಿಕಾರ. ಮಾಜಿ ಉಪ ಪ್ರಧಾನಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 117 ನೇ ಜನ್ಮದಿನಾಚರಣೆ ಹಾಗೂ ದಿನಾಂಕ 14.04.2024 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 133 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸುವುದರಿಂದ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಟ್ಟಣ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೂಡ್ಲಿಗಿ ಇವರ ಸಂಯುಕ್ತ ಆಶ್ರಯದಲ್ಲಿ 5-4-2024 ರಂದು ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 117ನೇ ಜಯಂತಿ ಹಾಗೂ ದಿನಾಂಕ 14.04.2024 ರಂದು ಡಾ. ಬಿಆರ್ ಅಂಬೇಡ್ಕರ್ 133 ನೇ ಜಯಂತಿಯನ್ನು ಬೆಳಿಗ್ಗೆ 10:30ಕ್ಕೆ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ತಾಲೂಕಿನ ಎಲ್ಲಾ ದಲಿತಪರ ಕನ್ನಡ ಪರ ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸದರಿ ಜಯಂತಿ ಕಾರ್ಯಕ್ರಮಕ್ಕೆ ಹಾಜರಾಗಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಈ ಮೂಲಕ ಕೋರಲಾಗಿದೆ.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ.ಬಿ.ಸಾಲುಮನೆ. ಕೂಡ್ಲಿಗಿ