ಕ್ರೀಡೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಉತ್ಸಾಹದಿಂದ ಆಟ ಆಡುವಂತೆ ಹುರಿ ದುಂಬಿಸಿದ – ಶಾಸಕ ಡಾ, ಶ್ರೀ ನಿವಾಸ್ ಎನ್.ಟಿ
ಹೂಡೇಂ ಆ.06

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಮಂಗಳವಾರ ರಂದು ಹೂಡೇಂ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ .ಎನ್.ಟಿ. ಅವರು ಕ್ರೀಡಾ ಜ್ಯೋತಿ ಬೆಳೆಗುವುದ ರೊಂದಿಗೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಹತ್ತಾರು ಶಾಲೆಯ ಸಾವಿರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಭಾಗವಸಿದರು. ಹಾಗೆ ಶಾಸಕರು ಮಕ್ಕಳ ಜೊತೆಗೆ ಕೆಲವು ಕ್ರೀಡೆಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕ್ರೀಡೆಗಳಲ್ಲಿ ಉತ್ಸಾಹ ಬರುವಂತೆ ಹುರಿ ದುಂಬಿಸಿದರು.

ಕ್ರೀಡಾಕೂಟದ ಕಾರ್ಯಕ್ರಮದ ಪ್ರಯುಕ್ತವಾಗಿ ವೇದಿಕೆಯಲ್ಲಿ ಮಾನ್ಯ ಎನ್ ಟಿ ಶ್ರೀನಿವಾಸ್ ರವರು ವಿದ್ಯಾರ್ಥಿಗಳಿಗೆ ಹಾಗೂ ನೆರೆದಂತ ಕ್ರೀಡಾಪಟುಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆ ತರಲು ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ತಡೆಗಟ್ಟಿ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಾತ್ರಿಕೆಹಟ್ಟಿ, ಜುಮ್ಮೋಬನಹಳ್ಳಿ- ಮ್ಯಾಸರಹಟ್ಟಿ, ಜರ್ಮಲಿ, ಅರ್ಜುನ ಚಿನ್ನೇನಹಳ್ಳಿ, ಇನ್ನೂ ಅವಶ್ಯ ಇರುವ ಕಡೆ ಮುಂದಿನ ದಿನಗಳಲ್ಲಿ ಸರ್ಕಾರಿ ಪ್ರೌಢ ಶಾಲೆಗಳನ್ನು ನಿರ್ಮಿಸಲಾಗುವುದು ಎಂದೂ ಹೇಳಿದರು. ಶಾಲೆಯ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿ ಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ನಮ್ಮ ತಾಲೂಕಿನಿಂದ ರಾಜ್ಯಕ್ಕೆ ಒಳ್ಳೆಯ ಹೆಸರು ತರಬೇಕು ಎಂದೂ ಕಿವಿಮಾತು ಹೇಳಿದರು. ಇನ್ನೂ ಶಿಕ್ಷಣ ಮತ್ತು ಆರೋಗ್ಯದ ಜೊತೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ದಿಂದ ಸಹಕಾರ ಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಿಕ್ಷಣ ಅಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಮುಖಂಡರು , ಗ್ರಾ. ಪಂ. ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರಾಘವೇಂದ್ರ.ಬಿ.ಸಾಲುಮನೆ..ಕೂಡ್ಲಿಗಿ.