ಯಮನೂರಪ್ಪ ಕೊಲೆ ಖಂಡಿಸಿ – ತಹಸೀಲ್ದಾರ್ ಮೂಲಕ ಮನವಿ.
ಮಸ್ಕಿ ಆ.21





ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಲು ಹೋಗಿದ್ದ ಪರಿಶಿಷ್ಟ ಜಾತಿಯ ಯಮನೂರಪ್ಪ ಬಂಡಿಹಾಳ ಅವರನ್ನು ಕೊಲೆ ಮಾಡಲಾಗಿದೆ ಎಂದು ದಲಿತ ಪ್ರಗತಿಪರರ ಒಕ್ಕೂಟದ ವತಿಯಿಂದ ತಹಶೀಲ್ದಾರರಾದ ಡಾ.ಮಲ್ಲಪ್ಪ.ಕೆ.ಯರಗೋಳ ಅವರಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.ಇಂತಹ ಘಟನೆಗಳು ಪುನರಾವರ್ತನೆ ಯಾಗದಂತೆ ಪರಿಶಿಷ್ಟರಿಗೆ ಕಾನೂನು ಬದ್ಧ ರಕ್ಷಣೆ ಒದಗಿಸಬೇಕು. ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.ರಾಜ್ಯದಲ್ಲಿ ಅತೀ ಹೆಚ್ಚು ಕೊಲೆ ದೌರ್ಜನ್ಯಗಳು ದಲಿತರ ಮೇಲೆ ನಡೆದಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದು, ಕೊಪ್ಪಳ ಜಿಲ್ಲೆಯಲ್ಲೇ ಹೆಚ್ಚು. ಇದಕ್ಕೆ ಎಲ್ಲಾ ಕಾರಣ ಜಿಲ್ಲಾಡಳಿತ ಹಾಗೂ ಅಲ್ಲಿನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ಪೋಲಿಸರು ನೇರ ಹೊಣೆಗಾರರಾಗಿದ್ದಾರೆ. ಈ ಕೂಡಲೇ ಪೋಲಿಸರು ನಿದ್ದೆಯಿಂದ ಎದ್ದು ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಲ್ಲವಾದರೆ ಮುಂದೆ ಇದೇ ರೀತಿ ಘಟನೆ ನಡೆದರೆ ಪ್ರತಿ ಜಿಲ್ಲೆಯಲ್ಲೂ ಉಗ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮಸ್ಕಿ ತಾಲೂಕಾ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ.