ಗಣೇಶ ಚತುರ್ಥಿ ಹಾಗೂ ಮಿಲಾದ್ ಹಬ್ಬದ ಶಾಂತಿ ಸಭೆ.

ಕೆ, ಹೊಸಹಳ್ಳಿ ಆ.28

ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ನಡೆದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಶಾಂತಿ ಸಭೆಯಲ್ಲಿ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಮಾತನಾಡಿದ ಅವರು, ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬ ಸೌಹಾರ್ದದ ಸಂದೇಶ ಸಾರಬೇಕೇ ಹೊರತು, ಯಾವುದೇ ಅಹಿತರ ಘಟನೆಗೆ ಕಾರಣವಾಗದಂತೆ ಎರಡೂ ಹಬ್ಬಗಳನ್ನು ಆಚರಿಸಬೇಕು. ಹೋಬಳಿ ವ್ಯಾಪ್ತಿಯಲ್ಲಿ 85ಕ್ಕೂ ಹೆಚ್ಚು ಹಳ್ಳಿಗಳು ಬರುತ್ತಿದ್ದು, ಅನೇಕ ವರ್ಷಗಳಿಂದ ಗಣೇಶ ಉತ್ಸವ ಆಚರಿಸುತ್ತಾ ಬರಲಾಗುತ್ತಿದೆ. ಬೆರಳೆಣಿಕೆಯಷ್ಟು ಸಲ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಉಳಿದಂತೆ ಎಲ್ಲ ಸಮಾಜದವರು ಅನ್ಯೋನ್ಯತೆಯಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದಾರೆ. ಅದೇ ರೀತಿಯಲ್ಲಿ ಈ ವರ್ಷವೂ ಶಾಂತ ರೀತಿಯಲ್ಲಿಯೇ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು.

ಅದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಇಲಾಖೆ ನೀಡಲಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿಗೆ ಭಂಗ ತರುವ ಯತ್ನ ಮಾಡಿದರೇ ಅಂಥವರ ವಿರುದ್ಧ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಈ ವೇಳೆ ಕೊಟ್ಟೂರು ಸಿಪಿಐ ವೆಂಕಟಸ್ವಾಮಿ ಮಾತನಾಡಿ ಪರಿಸರಕ್ಕೆ ಧಕ್ಕೆ ಎಂಬ ಕಾರಣಕ್ಕೆ ಪಿಒಪಿ ಗಣಪತಿಯನ್ನು ನಿಷೇಧಿಸಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ, ಧ್ವನಿವರ್ಷಕ ಬಳಕೆಗೆ ಪೊಲೀಸ್ ಠಾಣೆಯಲ್ಲಿ ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು. ಡಿಜೆ ಬಳಸುವಂತಿಲ್ಲ, 2 ಸ್ಪೀಕರ್‌ ಬಾಕ್ಸ್‌ಗೆ ಮಾತ್ರ ಅವಕಾಶವಿದೆ. ಹಾಗೆ ಈದ್ ಮಿಲಾದ್ ಹಬ್ಬದ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ಆಗದಂತೆ ನೋಡಿಕೊಳ್ಳಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.ಈ ಸಂದರ್ಭದಲ್ಲಿ ಪಿಎಸ್ಐ ಸಿದ್ರಾಮ ಬಿದರಾಣಿ ಸೇರಿದಂತೆ ಹೋಬಳಿಯ ಆದ್ಯಂತ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಸರ್ವ ಸದಸ್ಯರು, ಆಯಾ ಸಮುದಾಯದ ಮುಖಂಡರು, ಮುಸ್ಲಿಂ ಸಮುದಾಯದ ಮುಖಂಡರು, ಗಣೇಶ ಕಮಿಟಿಯ ಸರ್ವ ಪದಾಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿಗಳು ಇದ್ದರು.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button