ಸ್ಕೂಲ್ ಬಸ್ ಮತ್ತು ಸರ್ಕಾರಿ ನಡುವೆ ಡಿಕ್ಕಿ, ಇಬ್ಬರು ಮಕ್ಕಳು ಸಾವು – ಹಲವರಿಗೆ ಗಂಭೀರ ಗಾಯ.
ಮಸ್ಕಿ ಸ.05

ಮಾನ್ವಿ ಪಟ್ಟಣದ ಕಪಗಲ್ ದೊಡ್ಡ ಹಳ್ಳದ ಹತ್ತಿರ ಲಾಯೋಲ್ ಶಿಕ್ಷಣ ಸಂಸ್ಥೆಯ ಶಾಲಾ ವಾಹನ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪರಸ್ಪರ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾಯೋಲ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ವಾಹನದಲ್ಲಿದ್ದ ೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು.

ಅದರಲ್ಲಿ 7 ವಿದ್ಯಾರ್ಥಿಗಳಿಗೆ ಕಾಲುಗಳು ತುಂಡಾಗಿರುವ ಭೀಕರ ಘಟನೆ ನಡೆದಿದೆ. ಸಾರ್ವಜನಿಕ ಸಮಯಗಳು ಅಪಘಾತ ಗಂಭೀರವಾಗಿ ಗಾಯ ಗೊಂಡಿದ್ದ ಎರಡು ವಿದ್ಯಾರ್ಥಿಗಳು ಚಿಕಿತ್ಸೆ ಫಲಿಸದೇ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನುಳಿದ ವಿದ್ಯಾರ್ಥಿಗಳ ಚಿಕಿತ್ಸೆ ಮುಂದುವರೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 23 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕಲ್ಲೂರು ಹಾಗೂ ಮಾನ್ವಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನುಳಿದ ವಿದ್ಯಾರ್ಥಿಗಳ ಚಿಕಿತ್ಸೆ ಮುಂದುವರೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 23 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕಲ್ಲೂರು ಹಾಗೂ ಮಾನ್ವಿಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮಾನ್ವಿ ಪಟ್ಟಣದಲ್ಲಿನ ಲಾಯೋಲ ಶಿಕ್ಷಣ ಸಂಸ್ಥೆಯಲ್ಲಿನ ಪ್ರಾಥಮಿಕ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಕುರ್ಡಿ, ಹೊಕ್ರಾಣಿ, ಕಂಬಳತಿ, ಕಪಗಲ್, ಭಾಗದ ವಿದ್ಯಾರ್ಥಿಗಳನ್ನು ಮಾನ್ವಿ ಶಾಲೆಗೆ ಕರೆದುಕೊಂಡು ಬರುತ್ತಿರುವಾಗ ಮಾನ್ವಿ ಯಿಂದ ರಾಯಚೂರುಗೆ ಹೋಗುತ್ತಿದ್ದ ಕಲ್ಯಾಣ ಕರ್ನಾಟಕಸಾರಿಗೆ ಬಸ್ ಮುಖಾ ಮುಖಿ ಡಿಕ್ಕಿ ಸಂಭವಿಸಿದ ರಿಂದ ಈ ಅವಘಡ ನಡೆದಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ.