ಹೆಚ್.ಎಸ್ ಬಸಪ್ಪ ಗ್ರಾ,ಪಂ, ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ.
ರಾಂಪುರ ಸ.05

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಗ್ರಾಮ ಪಂಚಾಯಿತಿಯಲ್ಲಿ 5 ಸಪ್ಟಂಬರ್ 2024 ಗುರುವಾರ ಎಚ್ ಎಸ್ ಬಸಪ್ಪ ನೂತನ ಅಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಅಧಿಕಾರಿಯಾಗಿ ಕೊಟ್ಟೂರು ತಾಲೂಕಾ ದಂಡಾಧಿಕಾರಿಗಳಾದ ಜಿ ಕೆ ಅಮರೇಶ್ ನೇತೃತ್ವದಲ್ಲಿ ದಿನಾಂಕ 5 ಸೆಪ್ಟಂಬರ್ 2024 ರಂದು ಎಚ್ ಎಸ್ ಬಸಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಅವಿರೋಧವಾಗಿ ಎಚ್ ಎಸ್ ಬಸಪ್ಪರವರನ್ನು ಆಯ್ಕೆ ಮಾಡಿ ಘೋಷಣೆ ಮಾಡಿದರು.ಉಪಾಧ್ಯಕ್ಷರ ಸ್ಥಾನಕ್ಕೆ ಮಹಾ ದೇವಿರವರನ್ನು ಮುಂದುವರೆಯಲಿದ್ದಾರೆ ಎಂದು ತಿಳಿಸಿದರು. ಗ್ರಾಮ ಪಂಚಾಯತಿಯ ಸರ್ವ ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಉಮಾಪತಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು.