ಇಂದು ಪಕ್ಕುರ್ತಿ ಕೆರೆಯಿಂದ ರಾಂಪುರದ ಗ್ರಾಮದವರೆಗೂ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ – ಉದ್ಘಾಟನೆ ಮಾಡಿದ ಶಾಸಕರು.
ರಾಂಪುರ ಸ.08

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಇಂದು ರಾಂಪುರದಲ್ಲಿ 46 ₹ ಲಕ್ಷ ವೆಚ್ಚದ ಪಕ್ಕುರ್ತಿ ಕೆರೆಯಿಂದ ರಾಂಪುರ ಗ್ರಾಮದ ವರೆಗೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಟಿ ನಾಗವೇಣಿ ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು , ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮೂರು