ತಾಲೂಕಾ ಆಡಳಿತ ಸೌಧದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ – ಪಾಲ್ಗೊಂಡ ಶಾಸಕರು ಮತ್ತು ಸಚಿವರು.
ಮೊಳಕಾಲ್ಮುರು ಸ.09

ಇಂದು ಮೊಳಕಾಲ್ಮೂರು ತಾಲ್ಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ 2024 ಪ್ರಜಾ ಪ್ರಭುತ್ವಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅಗತ್ಯ ಸಲಹೆ ಸೂಚನೆ ನೀಡಿದರು.ಸಭೆಯಲ್ಲಿ ಯೋಜನಾ ಮತ್ತು ಸಾಂಖ್ಯಕ ಇಲಾಖೆ ಸಚಿವರಾದ ಡಿ ಸುಧಾಕರ್ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ಸೋಮಶೇಖರ್ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು.