ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಶಿಕ್ಷಕರಿಗೆ – ಶಾಸಕ ಹೆಚ್. ಆರ್. ಗವಿಯಪ್ಪ. ಸಲಹೆ.
ಹೊಸಪೇಟೆ ಸ.10

ಡಾ, ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ. ಜನ್ಮ ದಿನಾಚರಣೆ ಅಂಗವಾಗಿ ನಗರದ ಸಾಯಿಲೀಲಾ ರಂಗ ಮಂದಿರದಲ್ಲಿ ಸೆ.9 ರಂದು ನಡೆದ ಶಿಕ್ಷಕರ ದಿನಾಚರಣೆ – 2024 ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಮತ್ತು ಡಾ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಹಾಗೂ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಕಾಲಕ್ಕೆ ತಕ್ಕಂತೆ ಶಿಕ್ಷಕರು ಸಹ ಬದಲಾಗಬೇಕು. ಹೊಸ ಹೊಸ ಮತ್ತು ತಂತ್ರಜ್ಞಾನಗಳ ಬಗ್ಗೆ ಅರಿತು, ಕಲಿತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತಾಗಬೇಕು ಎಂದು ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಹೇಳಿದರು.ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಹ ಯೋಗದಲ್ಲಿ ಕಲಿಸ ಬೇಕೆನ್ನುವ ಹಂಬಲ ಶಿಕ್ಷಕರಲ್ಲಿರ ಬೇಕು. ಕಲಿಯ ಬೇಕೆನ್ನುವ ಆಸೆ ಮಕ್ಕಳಲ್ಲಿರ ಬೇಕು. ಅಂದಾಗಲೇ ಉತ್ತಮ ಕಲಿಕೆ ಸಾಧ್ಯವಾಗುತ್ತದೆ. ಹೊಸಪೇಟೆ ನಗರದಲ್ಲಿಯೇ ಈ ವರ್ಷ ಪರೀಕ್ಷೆಗೆ ಹಿಂದಿನ ವರ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಹೆಸರು ನೊಂದಾಯಿಸಿದ್ದಾರೆ. ಸಂತಸದ ಸಂಗಾತಿ ಯಾಗಿದೆ ಹೀಗೆ ಓದಲು ಬರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದು ಶಿಕ್ಷಕರ ಮಹತ್ತರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಹೊಸಪೇಟೆ ಸೇರಿದಂತೆ ವಿವಿಧೆಡೆಯ ಕೆಲವು ಶಾಲೆಗಳಲ್ಲಿ ಇರುವ ಕುಂದು ಕೊರತೆಗಳ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ತಾವು ಜಿಲ್ಲಾಧಿಕಾರಿ ಗಳೊಂದಿಗೆ, ಶಿಕ್ಷಣ ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಿದ್ದು ಎಲ್ಲವನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು. ಯಾವುದಾದರು ಶಾಲೆಗಳಲ್ಲಿ ಕೊಠಡಿ ಸಮಸ್ಯೆ, ಕುಡಿಯುವ ನೀರಿನ ತೊಂದರೆ ಹೀಗೆ ಏನೆ ಸಮಸ್ಯೆಗಳಿದ್ದರೆ ಅದನ್ನು ಕೂಡಲೇ ತಮ್ಮ ಗಮನಕ್ಕೆ ಅಥವಾ ಜಿಲ್ಲಾಧಿಕಾರಿಗಳು ಅಥವಾ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಲ್ಲಿ ಅದಕ್ಕೆ ತಾವು ಕೂಡಲೇ ಸ್ಪಂದನೆ ನೀಡುವುದಾಗಿ ಶಾಸಕರು ಹೇಳಿದರು. ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ ಮಾತನಾಡಿದರು. ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಮಾತನಾಡಿ, ಪ್ರತಿಯೊಬ್ಬ ಶಿಕ್ಷಕರಿಗೆ ತನು, ಮನ, ಭಾವ, ನಡೆ, ನುಡಿ ಎಂಬ ಪಂಚ ಶುದ್ಧತೆಗಳ ಬಗ್ಗೆ ಅರಿವು ಇರಬೇಕು. ಬೇರೆಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ವಿಶೇಷವಾದದ್ದಾಗಿದೆ. ಶಿಕ್ಷಕರಾದವರು ಕರ್ತವ್ಯಕ್ಕೆ ಸೇರಿದ ದಿನದಿಂದ ನಿವೃತ್ತಿ ಹೊಂದುವ ದಿನದವರೆಗೂ ನಿತ್ಯ ಕಲಿಯುತ್ತ, ಕಲಿಸುತ್ತಲೇ ಹೋಗುತ್ತಾರೆ ಎಂದರು. ಜಿಪಂ ಸಿಒ ನೋಂಗ್ಟಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಮಾಥನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಳಾದ ಎಮ್.ಎಸ್.ದಿವಾಕರ್ ಅವರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಗ್ಜಾಯ್ ಅಲೀ ಅಕ್ರಂ ಶಾ ಅವರೊಂದಿಗೆ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಅವರು ಭಾಗವಹಿಸಿದ್ದರು ಹಾಗೂ ಅವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಿದರು.ಇದೇ ಸಂಧರ್ಭದಲ್ಲಿ ಜಿಲ್ಲೆ ಉಪನಿರ್ದೇಶಕರಾದ ಶ್ರೀ ಮತಿ ಹನುಮಕ್ಕ ಅವರು ಹಾಗೂ ವಿಜಯನಗರ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಕುರಿ ಶಿವಮೂರ್ತಿ ಅವರು ಹಾಗೂ ಜಿಲ್ಲೆಯ ಶಿಕ್ಷಕರ ಸಂಘದ ಅಧ್ಯಕ್ಷರುಗಳು ಪಧಾದಿಕಾರಿಗಳು ಶಿಕ್ಷಕರು ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ