ತಾಲೂಕ ಪಂಚಾಯತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ ಜರುಗಿತು.
ಮಸ್ಕಿ ಸ.11

ತಾಲೂಕ ಪಂಚಾಯತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕರಾದ ಆರ್. ಬಸನಗೌಡ ತುರುವಿಹಾಳ ರವರು ಹಲವಾರು ವಿಷಯಗಳನ್ನು ಪ್ರಸ್ತಾಪಿಸಿ ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಕುಡಿಯುವ ನೀರು ಸರಬರಾಜು, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮುಖ್ಯವಾಗಿ ರೈತರಿಗಾಗಿ, ಮಕ್ಕಳಿಗಾಗಿ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಆದಷ್ಟೂ ಬೇಗನೆ ಸಮಸ್ಯೆಯನ್ನು ಬಗೆಹರಿಸಿ ಈ ಮೂರು ವಿಷಯಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲಾ.

ಆದ್ದರಿಂದ ಕಾರ್ಯ ಮುಕ್ತಾಯದ ನಂತರ ತಿಳಿಸಿ ನಾನು ಸ್ಥಳಕ್ಕೆ ಭೇಟಿ ನೀಡುವೆ ಹಾಗೆಯೇ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಈ ವೇಳೆ, ತಹಶೀಲ್ದಾರರಾದ ಡಾ, ಮಲ್ಲಪ್ಪ. ಕೆ. ಯರಗೋಳ. ತಾಲೂಕ ಪಂಚಾಯತಿ ಅಧಿಕಾರಿ ಅಮರೇಶ್ ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ಮೈಬೂಬ್ ಸಾಬ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ.