ಪ್ಲಾಸ್ಟಿಕ್ ಮುಕ್ತ ಮಾಡಲು ಅಂಗಡಿ ಮಾಲೀಕರಿಗೆ ಎಚ್ಚರಿಕೆಯ ಸೂಚನೆ ನೀಡಿದ ಕೂಡ್ಲಿಗಿ ಚೀಪ್ ಆಫೀಸರ್.
ಕೂಡ್ಲಿಗಿ ಜುಲೈ.15

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಶುಕ್ರವಾರದಂದು ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ದಿನಾಂಕ 01.07.2023 ರಿಂದ ದಿನಾಂಕ 28-7- 2023 ರವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಸರ್ಕಾರವು ವಿಜಯನಗರ ಜಿಲ್ಲೆಯ ಯೋಜನಾ ನಿರ್ದೇಶಕರ ಕಾರ್ಯಾಲಯಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶ ಇವರಿಗೆ ಮಾನ್ಯ ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಬೆಂಗಳೂರ್ ರವರ ಸುತ್ತೋಲೆಯ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳುವ ಕುರಿತು ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯ ಅನುಮೋದಿತ ಐ ಇ ಸಿ ಕ್ರಿಯಾ ಯೋಜನೆಯ ರೀತ್ಯಾ ವಿವಿಧ ಚಟುವಟಿಕೆಗಳು ಅಭಿಯಾನಗಳು ಮತ್ತು ಕಾರ್ಯಕ್ರಮಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿರುತ್ತಾರೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಉತ್ತೇಜಿಸುವ ಮೂಲಕ ಸುಸ್ಥಿರ ಮೂಲ ಸೌಕರ್ಯಗಳ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ಹಾಗೂ ಪರಿಸರ ಸ್ನೇಹಿ ಪ್ಯಾಕೇಜಿಂಗ್ ಮತ್ತು ಸಾಮಗ್ರಿಗಳ ಬಳಕೆಗಳನ್ನು ಉತ್ತೇಜಿಸಲು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಜುಲೈ 2023ರ ಮಾಹೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ ಕೈಗೊಳ್ಳಲು ನಿರ್ದೇಶಿಸಿರುವ ಪ್ರಕಾರ ವಿಜಯನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಿನಾಂಕ 1.7.2023 ರಿಂದ ದಿನಾಂಕ 28-7- 2023ರ ವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾನ್ಯ ನಿರ್ದೇಶಕರು ಹೋರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರ ಸುತ್ತೋಲೆ ಪ್ರಕಾರ ಕೂಡ್ಲಿಗಿಯ ಪ್ರಮುಖ ರಸ್ತೆ ಬದಿಯ ಅಂಗಡಿಗಳಲ್ಲಿ ಕೆಲವಾರು ಅಂಗಡಿಗಳಲ್ಲಿ ಇರುವಂತಹ ಗಳ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡು ಪ್ಲಾಸ್ಟಿಕ್ ಅಭಿಯಾನದ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಎಲ್ಲಾ ಅಂಗಡಿ ಮಾಲೀಕರಿಗಳಿಗೆ ಪ್ಲಾಸ್ಟಿಕ್ ಬಳಸದೆ ಪೇಪರ್ ಸಂಬಂಧಿತ ಹಾಗೂ ಬಟ್ಟೆ ಸಂಬಂಧಿತ ಚೀಲಗಳನ್ನು ಬಳಸಲು ಪ್ಲಾಸ್ಟಿಕ್ ಮುಕ್ತ ಮಾಡಲು ಎಚ್ಚರಿಕೆಯ ಸೂಚನೆಯನ್ನು ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳಾದ ಫಿರೋಜ್ ಖಾನ್ ಹಾಗೂ ಪಟ್ಟಣ ಪಂಚಾಯ್ತಿಯ ಹೆಲ್ತ್ ಇನ್ಸ್ಪೆಕ್ಟರ್ ಆದ ಗೀತಾ ಹಾಗೂ ಪೌರಕಾರ್ಮಿಕರ ಮೇಸ್ತ್ರಿ ಯಾದ ಪರಶುರಾಮ್ ಹಾಗೂ ಪೌರಕಾರ್ಮಿಕರ ಸಮ್ಮುಖದಲ್ಲಿ ಕೆಲವು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದವರನ್ನು ಎಚ್ಚರಿಕೆ ನೀಡುವುದರೊಂದಿಗೆ ಪ್ಲಾಸ್ಟಿಕ್ ಬಳಸಲಿಟ್ಟಿರುವಂತಹ ಎಲ್ಲಾ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡು ಪ್ಲಾಸ್ಟಿಕ್ ಮುಕ್ತ ಮಾಡಲು ಸೂಚನೆ ನೀಡಿದ್ದಾರೆ.
ಜಿಲ್ಲಾ ವರದಿಗಾರರು:ರಾಘವೇಂದ್ರ.ಸಾಲುಮನಿ. ಕೂಡ್ಲಿಗಿ