ಬೃಹತ್ ತಮಟೆ ಚಳುವಳಿ, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನ ಗೊಳಿಸ ಬೇಕು.
ಹೊಸಪೇಟೆ ಸ.14

ವಿಜಯನಗರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಪ್ರೊ, ಬಿ. ಕೃಷ್ಣಪ್ಪನವರು ಸ್ಥಾಪಿತ ವತಿಯಿಂದ ಸಾಯಿಬಾಬಾ ಸರ್ಕಲ್ ನಿಂದ ತಮಟೆ ಮೆರವಣಿಗೆ ಜಿಲ್ಲಾ ಕಛೇರಿ ತಲುಪಿ ಮಾನ್ಯ ಜಿಲ್ಲಾಧಿಕಾರಿಗಳು, ವಿಜಯನಗರ ಜಿಲ್ಲೆ ಇವರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ನೀಡಲಾಯಿತು. “ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರ” ಇದೆ. ಮತ್ತು ಈ ಆದೇಶವನ್ನು ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ದಿನಾಂಕ:-01.08.202 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದು ಕಳೆದ 30 ವರ್ಷಗಳಿಂದ ಪ್ರೊ, ಬಿ. ಕೃಷ್ಣಪ್ಪನವರು ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಅಲ್ಲದೇ ಇದು ಮೀಸಲಾತಿ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಈ ಹಿಂದೆ ಈ ವಿಚಾರದಲ್ಲಿ ಪರಸ್ಪರ ವಿರುದ್ಧವಾದ ತೀರ್ಪುಗಳನ್ನು ನ್ಯಾಯಾಲಯಗಳು ನೀಡಿದ್ದವು. ಈಗ ಸಿ.ಜೆ.ಐ ಡಿ. ವೈ. ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ವಿಚಾರದಲ್ಲಿದ್ದ ಗೊಂದಲವನ್ನು ಪರಿಹರಿಸಿದೆ. ಒಳ ಮೀಸಲಾತಿ ನೀಡಿಕೆಯು ಸಂವಿಧಾನ ಕಲ್ಪಿಸಿರುವ ಸಮಾನತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ. ವಾಸ್ತವಿಕವಾಗಿ ಸಮಾನತೆಯನ್ನು ಹೆಚ್ಚಿಸಲು ಅಗತ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಬದಲಿಗೆ ವಾಸ್ತವಿಕವಾಗಿ ಸಮಾನತೆಯನ್ನು ಹೆಚ್ಚಿಸಲು ಅಗತ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಪರಿಶಿಷ್ಟ ಜಾತಿಯ ಸಮುದಾಯಗಳು ಸಮರೂಪದಲ್ಲಿಲ್ಲ. ಮತ್ತು ಅವುಗಳಿಗೆ ಅಗೋಚರವಾದ ಏಕರೂಪವೂ ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಜಾತಿಗಳ ಒಳಗೆ ಇರುವ ಕೆಲವು ಉಪ ಜಾತಿಗಳಿಗೆ ಮೀಸಲಾತಿಯ ಪ್ರಯೋಜನವನ್ನು ಪಡೆದು ಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಉಪ ಜಾತಿಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಹಿಂದುಳಿದಿರುವಿಕೆಯ ಆಧಾರದಲ್ಲಿ ಮೀಸಲಾತಿ ನೀಡಿದರೆ ಈ ತನಕ ಮೀಸಲಾತಿಯ ಲಾಭ ಪಡೆದು ಕೊಳ್ಳಲು ಸಾಧ್ಯವಾಗದ ಸಮುದಾಯಗಳಿಗೆ ಕೂಡ ಪ್ರಯೋಜನ ದೊರೆಯಬಹುದು. ಪಂಜಾಬ್, ಹರಿಯಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿ ನಂತಹ ರಾಜ್ಯಗಳು ಒಳ ಮೀಸಲಾತಿ ನೀಡಲು ಈ ಹಿಂದೆ ಪ್ರಯತ್ನಿಸಿದ್ದವು. ಆದರೆ ಈ ಪ್ರಯತ್ನಗಳಿಗೆ ನ್ಯಾಯಾಂಗವೇ ತಡೆ ಹೊಡ್ಡಿತ್ತು. ಒಳ ಮೀಸಲಾತಿ ಕಲ್ಪಿಸುವುದು ಬಹಳ ಸಾಧ್ಯವಾಗದ ಕೆಲಸ. ಹಾಗಾಗಿ ಈ ಕೆಲಸವನ್ನು ನ್ಯಾಯಯುತವಾಗಿ ಮಾಡಬೇಕು. ಒಳ ಮೀಸಲಾತಿ ನೀಡಿಕೆಯು ಯಾರದೋ ಇಷ್ಟಾ ನಿಷ್ಟಗಳನ್ನು ಅವಲಂಬಿಸದೆ, ಗಣನೀಯವಾದ ಮತ್ತು ಪ್ರಮಾಣೀಕರಿಸ ಬಹುದಾದ ದತ್ತಾಂಶಗಳ ಆಧಾರದಲ್ಲಿ ನಿರ್ಧಾರ ವಾಗಬೇಕು. ಇದು ಬಹುದೊಡ್ಡ ಸವಾಲಿನ ಕೆಲಸ. ಪರಿಶಿಷ್ಟ ಜಾತಿಗಳಲ್ಲಿ ನೂರಾರು ಉಪ ಜಾತಿಗಳಿವೆ. ಒಪ್ಪಿತವಾದ ಮಾನದಂಡಗಳು ಮತ್ತು ವಿಧಾನಗಳ ಮೂಲಕ ತುಲನಾತ್ಮಕವಾಗಿ ಈ ಜಾತಿಗಳ ಹಿಂದುಳಿದಿರು ವಿಕೆಯನ್ನು ನಿರ್ಣಯಿಸ ಬೇಕು. ಈ ಮಾನದಂಡಗಳು ಸರ್ಕಾರದಲ್ಲಿನ ಪ್ರಾತಿನಿಧ್ಯ ಮತ್ತು ಶಿಕ್ಷಣಕ್ಕೆ ಸೀಮಿತವಾಗಿರ ಬಾರದು. ಸಾಮಾಜಿಕ ಸ್ಥಾನ ಮಾನವನ್ನು ಗಣನೆಗೆ ತೆಗೆದು ಕೊಳ್ಳಬೇಕು ಎಂದು ನ್ಯಾಯಾಲಯವು ಹೇಳಿದೆ. ಒಳ ಮೀಸಲಾತಿ ನೀಡುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರ ಬೇಕೆಂದು ಈ ಹಿಂದೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಆಗ್ರಹಿಸಿದ್ದರು. ಆದರೆ ಒಳ ಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ಈಗ ತೆರೆ ಎಳೆದಿದೆ. ಸುಪ್ರೀಂ ಕೋರ್ಟ್ ಆದೇಶ ಬಂದು ಒಂದು ತಿಂಗಳುಕಳೆದಿದ್ದರೂ ರಾಜ್ಯ ಸರ್ಕಾರ ಸದರಿ ಆದೇಶವನ್ನು ಅನುಷ್ಠಾನ ಗೊಳಿಸದೆ. ನಿದ್ದೆ ಹೊಡೆಯುತ್ತಿರುವ ಸರ್ಕಾರವನ್ನು ಬಡಿ ದೆಬ್ಬಿಸ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರೊ, ಬಿ.ಕೃಷ್ಣಪ್ಪನವರು ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಸುಪ್ರೀಂ ಕೋರ್ಟ್ ತೀರ್ಪು ಅನ್ವಯ ರಾಜ್ಯ ಸರ್ಕಾರ ತಕ್ಷಣವೇ ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಅನುಷ್ಠಾನ ಗೊಳಿಸಲು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮುಖಂಡರುಗಳಾದ ಎಸ್.ದುರುಗೇಶ್, ತೆಗ್ಗಿನಕೇರಿ ಕೊಟ್ರೇಶ್, ಬಿ.ಉದಯಕುಮಾರ್, ಇ.ಡಿ ಗುದ್ದಿ ದುರುಗೇಶ್, ಕಂದಗಲ್ಲು ಪರಶುರಾಮ್, ಶ್ರೀನಿವಾಸ್, ಕೋಗಳಿ ಉಮೇಶ್,ಕುಮಾರ್ ಮಾತನಡಕು, ಅಲೆಮಾರಿ ಬುಡುಗ ಜಂಗಮ ಸಮುದಾಯದ ರಾಜ್ಯಾಧ್ಯಕ್ಷರು ಸಣ್ಣ ಮಾರಣ್ಣ ಇತರರು ಮುಖಂಡರು ಬಹು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ