ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಿಗೆ – ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ.
ಚಿಕ್ಕ ಮಣ್ಣೂರು ಸ.17

ರೋಣ ತಾಲೂಕಿನ ಚಿಕ್ಕ ಮಣ್ಣೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಎಲ್.ಸಿ ಮುಂಡೇವಾಡಿ ಇವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ಜರುಗಿದ್ದ, ಡಾಕ್ಟರ್, ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ. ಜಯಂತೋತ್ಸವ ಅಂಗವಾಗಿ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಪ್ರಶಸ್ತಿ ಸಮಾರಂಭದಲ್ಲಿ, ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನಿರ್ಮಾಣ ಮಾಡಲು ಚಿಕ್ಕ ಮಣ್ಣೂರ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರ ಪಾತ್ರ ಮುಖ್ಯವಾಗಿರವುದನ್ನು ಗುರುತಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಾಗೂ ಅರೆ ಸರ್ಕಾರಿ ನೌಕರರ ಸಂಘದ ಕ್ಷೇಮಾಭಿವೃದ್ಧಿ ಸಂಘವು ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾಯರ ಸಭಾ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಯನ್ನು ಚಿಕ್ಕ ಮಣ್ಣೂರ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಎಲ್ ಸಿ ಮುಂಡೇವಾಡಿ ಇವರಿಗೆ ಪ್ರೌಢ ಶಾಲೆಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಹ ಶಿಕ್ಷಕ ಸಿದ್ದಾರ್ಥ್ ಪೂಜಾರಿ ದೈಹಿಕ ಶಿಕ್ಷಕಿ ಜೋತಿ ಬಲಕುಂದಿ ಪ್ರೌಢ ಶಾಲೆಯ ಶಿಕ್ಷಕರು ಸಿಬ್ಬಂದಿಗಳು ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಾನಂದ. ಎಫ್.ಗೋಗೇರಿ.ತೋಟಗುಂಟಿ.ಗದಗ