ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ – ಅರ್ಜಿ ಆಹ್ವಾನ.

ಇಂಡಿ ಮೇ.27

ರಾಜ್ಯ ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಇಂಡಿ ತಾಲೂಕು ಅಧ್ಯಕ್ಷ ಬಸವರಾಜ ರಾವೂರ ಹೇಳಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಮಕ್ಕಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚಿನ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು ನೌಕರರ ಸಂಘದ ಸಾಮಾಜಿಕ ಜಾಲ ತಾಣದ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ರಾವೂರ ಅವರು ತಿಳಿಸಿದ್ದಾರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button