ಧರ್ಮಸ್ಥಳ ಸಂಘ ದಿಂದ ಮದ್ಯ ವ್ಯಸನೀಯರಿಗೆ ಕೂಡ್ಲಿಗಿಯಲ್ಲಿ 1853 ನೇ. ಮಧ್ಯ ವರ್ಜನಾ ಶಿಬಿರ 8 ದಿನಗಳ ಕಾಲ ಕಾರ್ಯಕ್ರಮ ನಡೆಯಿತು.
ಕೂಡ್ಲಿಗಿ ಸ.17

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ ಕೊಟ್ಟೂರು ರಸ್ತೆಯಲ್ಲಿ ಬರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮತ್ತು ಜಿಲ್ಲಾ ಜನ ಜಾಗೃತಿ ವೇದಿಕೆ ವಿಜಯನಗರ, ಮತ್ತು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಕೂಡ್ಲಿಗಿ ಮತ್ತು ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಪರಮ ಪೂಜ್ಯ ರಾಜರ್ಷಿ ಡಾ, ಡಿ ವೀರೇಂದ್ರ ಹೆಗಡೆಯವರು ಹಾಗೂ ಮಾತೃಶ್ರೀ ಡಾ, ಹೇಮಾವತಿ ಯವರ ಆದೇಶದಂತೆ 1853 ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ. ಬ್ರ. ಪ್ರಶಾಂತ ಸಾಗರ ಶಿವಾಚಾರ್ಯ ಮಹಾ ಸ್ವಾಮಿಜಿಗಳು, ಶಿಬಿರಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದರು,

ಈ ಪುಣ್ಯ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಮದ್ಯ ವ್ಯಸನದ ಅಮಲಿನಿಂದ ಹೊರಬಂದು ಇಲ್ಲಿ ಸೇರಿರುವಂತ ಎಲ್ಲಾ ಶಿಬಿರಾರ್ತಿಗಳೇ ನಿಮ್ಮ ಕುಟುಂಬದಲ್ಲಿ ನೀವುಗಳು ಹೊಸ ಜೀವನ ರೂಪಿಸಿ ಕೊಳ್ಳುವಂತೆ ಆಶೀರ್ವದಿಸಿದರು. ಕಾರ್ಯಕ್ರಮದ ಉದ್ಘಾಟನೆ ಮಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕಾವಲಿ ಶಿವಪ್ಪ ನಾಯಕ ಇವರು 8 ದಿನ ನಡೆಯುವ ಶಿಬಿರದಲ್ಲಿ ಪ್ರತಿಯೊಬ್ಬರು ಮಾಹಿತಿ ಪಡೆದು ಕೊಂಡು ಉತ್ತಮ ನಾಗರಿಕರಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಣಕಾರ್ ವೀರಣ್ಣ ಇವರು ವಹಿಸಿದ್ದು. ಕಾರ್ಯಕ್ರಮಕ್ಕೆ ಮತ್ತು ಎಲ್ಲ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಮತ್ತು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರು, ಮದ್ಯವರ್ಜನ ಶಿಬಿರದ ಗೌರವಧ್ಯಕ್ಷರು, ಉಪಾಧ್ಯಕ್ಷರುಗಳು, ಗೌರವ ಸಲಹೆಗಾರರು, ಜಿಲ್ಲಾ ನಿರ್ದೇಶಕರು, ಕಾರ್ಯಕ್ರಮಕ್ಕೆ ಸಹಕಾರ ನೀಡಿದ ತಾಲೂಕಿನ ಅನೇಕ ಗಣ್ಯರು, ವಕೀಲರು, ಉದ್ಯಮಿಗಳು, ಪತ್ರಕರ್ತರು, ಮಾದ್ಯಮದವರು, ಜನ ಜಾಗೃತಿ ಯೋಜನಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಅನೇಕ ಸಂಘ ಸಂಸ್ಥೆಯ ಮುಖ್ಯಸ್ಥರುಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ 90 ಕ್ಕಿಂತ ಹೆಚ್ಚು ಶಿಬಿರಾರ್ಥಿಗಳು ಪಾಲ್ಗೊಂಡಿರುತ್ತಾರೆ.

ಮತ್ತು ಈ ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು, ಸೇವಾ ಪ್ರತಿನಿಧಿಗಳು, ನವ ಜೀವನ ಸಮಿತಿಯ ಸ್ವಯಂ ಸೇವಕರು ಪಾಲ್ಗೊಂಡಿದ್ದರು. ಹಾಗೆ ಈ ಸಂದರ್ಭದಲ್ಲಿ ಕ.ರ.ವೇ ತಾಲೂಕು ಅಧ್ಯಕ್ಷರು ಕಾಟೇರ್ ಹಾಲೇಶ್, ಕ.ರ.ವೇ ತಾಲೂಕು ಮಹಿಳಾ ಅಧ್ಯಕ್ಷರು ಲಕ್ಷ್ಮಿ ದೇವಿ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಎ.ದಿಬ್ಬದ ಹಳ್ಳಿ ವಿ.ಎಸ್ ಎಸ್.ಎನ್ ಅಧ್ಯಕ್ಷರು ಸಿದೇಶ್, ಹಾಗೂ ಡಿ.ಎಸ್.ಎಸ್ ತಾಲೂಕು ಸಂಚಾಲಕ ದುರುಗೇಶ್ ವಕೀಲರು, ಖಾನಾವಳಿ ಕೊಟ್ರೇಶ್, ಬಿಜೆಪಿಯ ಪವಿತ್ರ, ಕಾಂಗ್ರೇಸ್ ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಮಹೇಂದ್ರ ಸ್ವಾಮೀ, ಹಾಗೂ ಇನ್ನೂ ಅನೇಕ ಮುಖಂಡರು ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ.ಬಿ. ಸಾಲುಮನೆ.ಕೂಡ್ಲಿಗಿ.ವಿಜಯನಗರ