ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಕರ್ಮ ಹಾಗೂ ಕಲ್ಯಾಣ ಕರ್ನಾಟಕ ವಿಮೋಚನೆ ಆಚರಣೆ.
ಖಾನಾ ಹೊಸಹಳ್ಳಿ ಸ.17

ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಮತ್ತು ದೇವಶಿಲ್ಪಿ ವಿಶ್ವಕರ್ಮರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎ.ಸಿ ಚೇತನ್ ಅವರ ಉಪಸ್ಥಿತಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನೆಯ ಹರಿಕಾರ ಸರದಾರ್ ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧೀಜಿ, ಡಾ, ಬಿ.ಆರ್. ಅಂಬೇಡ್ಕರ್, ಮತ್ತು ವಿಶ್ವಕರ್ಮ ರವರ ಭಾವ ಚಿತ್ರಕ್ಕೆ ಪೂಜೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕರ್ನಾಟಕದ ಉಳಿದ ಎಲ್ಲಾ ಭಾಗಗಳಲ್ಲಿ ವರ್ಷಕ್ಕೆ ಒಂದು ಬಾರಿ ಸ್ವತಂತ್ರ ದಿನಾಚರಣೆ ಆಚರಿಸಿದರೆ ಕಲ್ಯಾಣ ಕರ್ನಾಟಕದ ಜನರು ಮಾತ್ರ ಎರಡು ಬಾರಿ ಸ್ವತಂತ್ರ ದಿನಾಚರಣೆಯನ್ನು ಆಚರಿಸುತ್ತಾರೆ. ಆಗಸ್ಟ್ 15 ರಂದು ಬ್ರಿಟಿಷರ ದಾಸ್ಯದಿಂದ ಹೊರ ಬಂದು ಸಂಭ್ರಮವಾದರೆ, ಸೆಪ್ಟೆಂಬರ್ 17 ನಿಜಾಮರ ಮತ್ತು ಜಕಾರ ದಬ್ಬಾಳಿಕೆ ಯಿಂದ ಹೊರ ಬಂದು ಭಾರತದ ಒಕ್ಕೂಟಕ್ಕೆ ಸೇರಿದ ಸುದಿನವನ್ನು ನೆನಪಿಸಿ ಕೊಳ್ಳುತ್ತಾರೆ.

ಸಂಪೂರ್ಣ ಶ್ರೇಯೋ ಭಾರತದ ಪರ ಸೇರಿ ಕೊಳ್ಳಲು ರಜಾಕರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಸ್ಮರಿಸಿದರು, ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿನಯ್ ಕುಮಾರ್, ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ನಾಗರಾಜ್, ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗರಾಜ್, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹೊಸಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ನೇತ್ರಮ್ಮ ಮಂಜುನಾಥ,ಸದಸ್ಯರು, ಸಿಬ್ಬಂದಿ ವರ್ಗದವರು, ಮದರ್ ತರೇಸಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದವರು, ಊರಿನ ಮುಖಂಡರು ಸೇರಿದಂತೆ ಇತರ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ.