ರಾಂಪುರ ಗ್ರಾಮ ಪಂಚಾಯಿತಿಯಲ್ಲಿ “ನಮ್ಮ ನಡೆ ಸ್ವಚ್ಛತೆ ಕಡೆ”.
ಕೊಟ್ಟೂರು ಸ.22

21-9-2024 ಶನಿವಾರ ರಾಂಪುರ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ “ನಮ್ಮನಡೆ ಸ್ವಚ್ಛತೆ ಕಡೆ” ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಆನಂದ ರವರು ದೀಪ ಬೆಳಗಿಸಿ ಪ್ರತಿಜ್ಞೆ ಮಾಡುವುದರ ಮೂಲಕ ಈ ಕಾರ್ಯಕ್ರಮವನ್ನು ಚಾಲನೆ ನೀಡಿದರು. ನಂತರ ಗ್ರಾಮದಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಲು ಗ್ರಾಮದ ಬೀದಿಗಳಲ್ಲಿ ಜಾಥಾ ನಡೆಸಿ ಮತ್ತು ಗ್ರಾಮದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಗ್ರಾಮಸ್ಥರಿಗೆ ಸ್ವಚ್ಛತೆ ಜಾಗೃತಿ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಎ.ಡಿ ವಿಜಯಕುಮಾರ್ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಪಿ.ಡಿ.ಓ ಉಮಾಪತಿ ಪಿ. ಸಿಬ್ಬಂದಿ ವರ್ಗದವರು, ಇ.ಸಿ.ಓ ನಿಂಗಪ್ಪ ಶಿಕ್ಷಕರು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎಚ್ ಬಸಪ್ಪ, ಉಪಾಧ್ಯಕ್ಷರಾದ ಎಚ್.ಯು ಮಹಾದೇವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಅಂಗಡಿ ನಾಗರಾಜ, ಹುಲಿಗೆಮ್ಮ ಗಂಡ ಬಸವರಾಜ, ಡಿ ಗಂಗಮ್ಮ ಗಂಡ ನಾಗರಾಜ, ಅನುಸೂಯ ಗಂಡ ಭರ್ಮಲಿಂಗಪ್ಪ ,ಎಚ್. ಮೂಗಪ್ಪ, ಆರೋಗ್ಯ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಘ ಸಂಸ್ಥೆಗಳ ವರ್ಗದವರು, ಶಿಕ್ಷಕರು ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು .