ಎರಡನೇ ಬಾರಿಗೆ ತುಂಬಿದ ತುಂಗಭದ್ರಾ ಅಣೆಕಟ್ಟು ರೈತರ ಎರಡನೇ ಬೆಳೆಗೂ ನೀರು ಸಿಗಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ.

ಹೊಸಪೇಟೆ ಸ.23

ಕರ್ನಾಟಕದ ಎಡ ಮತ್ತು ಬಲ ದಂಡೆ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ತುಂಗಭದ್ರಾ ಆಣೆಕಟ್ಟು ಇದೇ ವರ್ಷ ಎರಡನೇ ಬಾರಿಗೆ ತುಂಬಿದೆ. ರೈತರು ಆತಂಕ ಪಡಬೇಕಿಲ್ಲ; ಎರಡನೇ ಬೆಳೆಗೂ ರೈತರಿಗೆ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯ ಜನತೆಗೆ ಧೈರ್ಯ ತುಂಬಿದರು.ತುಂಗಭದ್ರಾ ಆಣೆಕಟ್ಟಿನ ಗೇಟ್‌ನ್ನು ವಾರದೊಳಗೆ ನಿರ್ಮಿಸಿ, ಅಳವಡಿಸಿದ ಅಧಿಕಾರಿಗಳು, ತಂತ್ರಜ್ಞರು, ಸಿಬ್ಬಂದಿಗಳು ಹಾಗೂ ಗೇಟ್ ನಿರ್ಮಾಣ ಸಂಸ್ಥೆಯ ಪ್ರತಿ ನಿಧಿಗಳಿಗೆ ಮುನಿರಾಬಾದ್ ಹೈಸ್ಕೂಲ್ ಆವರಣದಲ್ಲಿ ಜಲ ಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ದಿಂದ ಸೆ.22 ರಂದು ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾಮಾರ್ಥ್ಯ ಡ್ಯಾಮಿಗಿದೆ. ಹೂಳು ತುಂಬಿದ್ದರಿಂದಾಗಿ 26 ಟಿ.ಎಂ.ಸಿ ನಷ್ಟು ನೀರು ಶೇಖರಣೆಯಾಗುತ್ತಿಲ್ಲ. ಕಳೆದ ಆಗಸ್ಟ್ನಲ್ಲಿ ನಾವು ಜನತೆಗೆ ಮಾತು ಕೊಟ್ಟಂತೆ ಡ್ಯಾಮ್ ಮತ್ತೆ ತುಂಬಿದೆ. ಬಾಗಿನ ಅರ್ಪಿಸಿದ್ದೇವೆ. ಇನ್ನೂ ಮಳೆ ಬರುವ ಸಂಭವವಿದೆ. ಮೊದಲನೇ ಬೆಳೆಗೆ ನೀರಿನ ತೊಂದರೆ ಯಾಗುವುದಿಲ್ಲ. ಎರಡನೇ ಬೆಳೆಗೂ ನೀರು ಸಿಗಲಿದೆ ಎಂದರು.ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಸಾಕಷ್ಟು ಅನುಕೂಲವಾಗಿದೆ. ರಾಜ್ಯದ 7 ಕೋಟಿ ಜನರ ಪೈಕಿ 3 ಕೋಟಿಯಷ್ಟು ಮಹಿಳೆಯರು ಉಚಿತ ಪ್ರಯಾಣ ಮಾಡಲು ಶಕ್ತಿ ಯೋಜನೆ ಸಹಕಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಕುಟುಂಬಗಳು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ 2000 ರೂ. ಪಡೆಯುತ್ತಿವೆ. ಈ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಯಾಗಿವೆ ಎಂದು ತಿಳಿಸಿದರು. ಅಭಿನಂದನೆಗಳು : ಕಳೆದ ಆಗಸ್ಟ್ 10 ರಂದು ಡ್ಯಾಮನ ಗೇಟ್ ಮುರಿದಾಗ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇನ್ನಿತರರು ಹಗಲು ರಾತ್ರಿ ಸ್ಥಳದಲ್ಲಿದ್ದು ದುರಸ್ತಿ ಪಡಿಸಿದರು. ನಾನು ಸಹ ಡ್ಯಾಮ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ. ಎಲ್ಲರೂ ಸೇರಿ ಕಾರ್ಯ ಪ್ರವೃತ್ತರಾತಗಿದ್ದ ರಿಂದ ಒಂದೇ ವಾರದಲ್ಲಿ ಗೇಟ್ ಅಳವಡಿಸಿದೆವು. ಇದರಿಂದಾಗಿ 20 ಟಿ.ಎಂ.ಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯ ನಾಯ್ಡು, ಎಂಜಿನಿಯರ್‌ಗಳು ಮತ್ತು ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರ ಮತ್ತು ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸುವೆ ಎಂದರು.ಸಮಾರಂಭದಲ್ಲಿ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮತ್ತು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿದರು.

ಸಮಾರಂಭದಲ್ಲಿ ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ.ಎನ್.ಗಣೇಶ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರ ಶಾಸಕರಾದ ಆರ್.ಬಸನಗೌಡ ತುರುವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಶಾಸಕರಾದ ಬಸನಗೌಡ ದದ್ದಲ್, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಂ, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ರಾಯಚೂರು ಸಂಸದರಾದ ಜಿ.ಕುಮಾರ್ ನಾಯಕ, ಕೂಡ್ಲಿಗಿ ಶಾಸಕರಾದ ಡಾ ಶ್ರೀನಿವಾಸ್ ಎನ್.ಟಿ., ಹೂವಿನಹಡಗಲಿ ಶಾಸಕರಾದ ಎಲ್.ಕೃಷ್ಣ ನಾಯಕ, ಹರಪ್ಪನಹಳ್ಳಿ ಶಾಸಕರಾದ ಎಂ.ಪಿ ಲತಾ ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯರುಗಳಾದ ಬಸನಗೌಡ ಬಾದರ್ಲಿ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್ ಎನ್., ಮುನಿರಾಬಾದ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಯುಬ್ ಖಾನ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೊಹನ್ ರಾಜ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್. ಲೋಕೇಶ್ ಕುಮಾರ್, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್. ಅರಸಿದ್ದಿ, ಹಾಗೂ ಎಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ.ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮನಬಾವಿ, ತುಂಗಭದ್ರಾ ಬೋರ್ಡ್ ಕಾರ್ಯದರ್ಶಿಗಳಾದ ಒ.ಆರ್.ಕೆ. ರೆಡ್ಡಿ, ಕ.ನೀ.ನಿ.ನಿ, ನೀ.ಕೇ.ವ. ಮುನಿರಾಬಾದ್ ಮುಖ್ಯ ಅಭಿಯಂತರರಾದ ಹನುಮಂತ ಜಿ ದಾಸರ, ಮುನಿರಾಬಾದ್ ತುಂಗಭದ್ರ ಯೋಜನ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ಬೋರ್ಡ್ ಅಧೀಕ್ಷಕ ಅಭಿಯಂತರರಾದ ಶ್ರೀಕಾಂತ್ ರೆಡ್ಡಿ, ರಾಯಚೂರು ಜಿಲ್ಲೆಯ ಯರಮರಸ್ ಕ್ಯಾಂಪ್ ತುಂಗಭದ್ರ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಕೆ.ಬಿ.ಹೆಚ್ ಶಿವಶಂಕರ್, ಮುನಿರಾಬಾದ್ ಕ.ನೀ.ನಿ.ನಿ ನಂ.1 ತುಂಗಭದ್ರಾ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗಿರೀಶ್ ಸಿ ಮೇಟಿ, ತುಂಗಭದ್ರಾ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಜಿ.ಟಿ. ರವಿಚಂದ್ರ, ಮುನಿರಾಬಾದ್ ಕ.ನೀ.ನಿ.ನಿ ಮುಖ್ಯ ಕಾಮಗಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರ್ಮರಾಜ ಎಲ್ ಇದ್ದರು.. ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸ್ವಾಗತಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button