ಶೈಕ್ಷಣಿಕ ಕ್ಷೇತ್ರಕ್ಕೆ ಮೊದಲ ಆದ್ಯತೆ – ಡಾ.ಎನ್.ಟಿ. ಶ್ರೀನಿವಾಸ್. ಶಾಸಕ.
ಚಿಕ್ಕ ಜೋಗಿಹಳ್ಳಿ ಫೆಬ್ರುವರಿ.2

ಗ್ರಾಮೀಣ ಭಾಗದ ಹಿಂದುಳಿದ, ಅಲ್ಪಸಂಖ್ಯಾತ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿರಾಗಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ವಸತಿಶಾಲೆ, ಕೆಪಿಎಸ್, ಏಕಲವ್ಯ ವಸತಿ ಶಾಲೆ ಸ್ಥಾಪಿಸುವೆ ಎಂದರು. ಸಮೀಪದ ಚಿಕ್ಕಜೋಗಿಹಳ್ಳಿಯಲ್ಲಿ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಹಾಗೂ ವಿವಿಧ ಸಂಸ್ಥೆಗಳು ಹಮ್ಮಿಕೊಂಡಿದ್ದ 2023 – 24 ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಗಾರವನ್ನು ಕೂಡ್ಲಿಗಿ ಶಾಸಕರು ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಮುಂದುವರಿದಂತೆ ವಿಜಯನಗರ ಜಿಲ್ಲೆಯೂ ಫಲಿತಾಂಶದಲ್ಲಿ ಒಳ್ಳೆಯ ಹೆಸರು ತರಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆ ಕುರಿತು ಕಾರ್ಯಾಗಾರದಲ್ಲಿ ಹೇಳಿಕೊಟ್ಟಂತೆ ವಿದ್ಯಾರ್ಥಿಗಳು ಭಯ ಬಿಟ್ಟು ಶಿಸ್ತು ಬದ್ಧವಾಗಿ ಪರೀಕ್ಷೆ ಎದುರಿಸಬೇಕು. ನಮ್ಮ ಕೂಡ್ಲಿಗಿ ಕ್ಷೇತ್ರದಲ್ಲಿ ಎಸ್. ಎಸ್. ಎಲ್. ಸಿ. ನಲ್ಲಿ ಹೆಚ್ಚು ಅಂಕ ಪಡೆದವರಿಗೆ ಉಚಿತವಾಗಿ ಲ್ಯಾಪ್‌ಟಾಪ್ ಕೊಡುತ್ತೇನೆ ಎಂದೂ ಹೇಳಿದರು. ಬರುವ ಮುಂದಿನ ದಿನಗಳಲ್ಲಿ ಇಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಈ ವೇಳೆ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ