ವಿಶ್ವಕರ್ಮ ಜಯಂತ್ಯೋತ್ಸವ.
ಖಾನಾ ಹೊಸಹಳ್ಳಿ ಸ.24

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಸಮಾಜ ಬಾಂಧವರು ವಿಶ್ವಕರ್ಮ ಜಯಂತೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಗ್ರಾಮದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜಾ ಕೈಂಕರ್ಯಗಳು ನೆರವೇರಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಜರುಗಿತು. ಇದೇ ಸಂದರ್ಭದಲ್ಲಿ ಶ್ರೀನಿವಾಸ್ ಆಚಾರಿ, ಮಂಜುನಾಥ, ಮಂಜುನಾಥ ಆಚಾರಿ, ನಾಗೇಶ ಆಚಾರಿ, ಮಧ್ವಾಚಾರಿ, ಕಾಳಾಚಾರಿ, ವೀರಭದ್ರ ಚಾರಿ, ಸಂತೋಷ ಆಚಾರಿ, ಕೇಶವ ಆಚಾರಿ, ಮಹಾಂತೇಶ ಆಚಾರಿ, ಗಜೇಂದ್ರ ಆಚಾರಿ, ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಯುವಕರು, ಮಹಿಳೆಯರು, ಇತರರು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ