50₹. ಲಕ್ಷದ ಸಿ.ಸಿ ರಸ್ತೆಯ ಕಾಮಗಾರಿಗೆ ಚಾಲನೆ ನೀಡಿದ – ಶಾಸಕ ಜಿ, ಹಂಪಯ್ಯ ನಾಯಕ್.
ಮಾನ್ವಿ ಸ.26

ಸರಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಕೋಟಿ ಗಟ್ಟಲೆ ಅನುದಾನ ನೀಡಿದ ಹಿನ್ನೆಲೆಯಲ್ಲಿ ಮಾನ್ವಿ ವಿಧಾನ ಸಭಾ ಕ್ಷೇತ್ರದ ಕರಡಿಗುಡ್ಡ
ಗ್ರಾಮದ ರಸ್ತೆಗೆ ಸಿಸಿ ರಸ್ತೆ ನಿರ್ಮಿಸಲು 50₹ ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಹಂಪಯ್ಯ ನಾಯಕ್ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಡಿಗುಡ್ಡ ಗ್ರಾಮದ ರಸ್ತೆ ನಿರ್ಮಿಸಲು ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರ ರೊಂದಿಗೆ ಮಾತನಾಡಿ, 2024-25 ನೆ. ಸಾಲಿನ ಕೆ.ಕೆ.ಆರ್.ಡಿ.ಬಿ ಅನುದಾನವಾಗಿದ್ದು, ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಹಣೆ ಮಾಡುತ್ತಿದೆ. ಗುತ್ತಿಗೆದಾರ ಮೋಹನ್ ಕುಮಾರ್ ಅವರು ಕಾಮಗಾರಿ ಗುಣ ಮಟ್ಟದಲ್ಲಿ ಮಾಡಬೇಕು ಎಂದು ಸೂಚನೆ ನೀಡಿದರು.ಗ್ರಾಮೀಣ ಭಾಗದ ಅಭಿವೃದ್ಧಿ ಮಾಡುವುದೆ ನಮ್ಮ ಉದ್ದೇಶ, ಹೀಗಾಗಿ ನನ್ನ ಅವಧಿಯಲ್ಲಿ ಮಾನ್ವಿ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇನೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ಕನಕ್ಕುಂದಿ.ಮಾನ್ವಿ